ಈಗಿನ ಸುದ್ದಿ

ನ್ಯಾ.ಸ್ವತಂತ್ರ ಕುಮಾರ್‌ರಿಂದ ಮಾಧ್ಯಮದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Published On :

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಹಸಿರು ಮಂಡಳಿಯ ಅಧ್ಯಕ್ಷ ಸ್ವತಂತ್ರ ಕುಮಾರ್ ಅವರು ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಯುವತಿಯ ಹಾಗೂ ಮಾಧ್ಯಮ ಸಂಸ್ಥೆಗಳ ವಿರುದ್ಧ ಬುಧವಾರ 5 ಕೋಟಿ ರುಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಇಂದು ದೆಹಲಿ ಹೈಕೋರ್ಟ್‌ನಲ್ಲಿ ಯುವತಿ ಹಾಗೂ ಮಾಧ್ಯಮ ಸಂಸ್ಥೆಗಳ ವಿರುದ್ಧ ಕೇಸ್ ದಾಖಲಿಸಿರುವ ನ್ಯಾ.ಸ್ವತಂತ್ರ ಕುಮಾರ್ ಅವರು, ಕೋರ್ಟ್ ಆದೇಶಗಳನ್ನು ಹೊರತುಪಡಿಸಿ, ತಮ್ಮ ಮೇಲಿನ ಆರೋಪದ ಬಗ್ಗೆ ಯಾವುದೇ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಮನವಿ ಮಾಡಿದ್ದಾರೆ.

ಹೈಕೋರ್ಟ್ ನ್ಯಾ. ಜಿ.ಎಸ್. ಸಿಸ್ಟೇನಿ ಅವರು ಸ್ವತಂತ್ರ ಕುಮಾರ್ ಅವರ ಅರ್ಜಿ ಸ್ವೀಕರಿಸಿದ್ದು, ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಿದ್ದಾರೆ. ಇಂದು ಮಧ್ಯಾಹ್ನದ ನಂತರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ನ್ಯಾ.ಸ್ವತಂತ್ರ ಕುಮಾರ್ ಅವರು ಜ.11ರಂದು ಮಾಧ್ಯಮ ಸಂಸ್ಥೆಗಳಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರು. ಅಲ್ಲದೆ ಲೈಂಗಿಕ ಕಿರುಕುಳ ಪ್ರಕರಣವನ್ನು ವರದಿ ಮಾಡಿದ ಇಂಡಿಯನ್ ಎಕ್ಸ್‌ಪ್ರೆಸ್, ಟೈಮ್ಸ್ ನವ್ ಮತ್ತು ಸಿಎನ್‌ಎನ್-ಐಬಿಎನ್ ಕ್ಷೆಮೆಯಾಚಿಸಬೇಕು. ಇಲ್ಲದಿದ್ದರೆ ಕ್ರಿಮಿನಲ್ ಹಾಗೂ ಮಾನನಷ್ಟ ಮೊಕದಮೆ ದಾಖಲಿಸುವುದಾಗಿ ಎಚ್ಚರಿಸಿದ್ದರು.

ನ್ಯಾ.ಸ್ವತಂತ್ರ ಕುಮಾರ್, ಕೇಂದ್ರ, ಅಟರ್ನಿ ಜನರಲ್‌ಗೆ ನೋಟಿಸ್
ಈ ಮಧ್ಯೆ, ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸ್ವತಂತ್ರ ಕುಮಾರ್, ಕೇಂದ್ರ ಸರ್ಕಾರ ಹಾಗೂ ಅಟರ್ನಿ ಜನರಲ್ ಅವರಿಗೆ ನೋಟಿಸ್ ನೀಡಿದೆ.

ಸ್ವತಂತ್ರ ಕುಮಾರ್ ವಿರುದ್ಧ ತನಿಖೆ ನಡೆಸಬೇಕು ಎಂದು ಲೈಂಗಿಕ ಕಿರುಕುಳಕ್ಕೆ ಒಳಗಾದ ತರಬೇತಿ ನಿರತ ವಕೀಲೆ ಕಳೆದ ಸೋಮವಾರ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ಅವರು, ಫೆಬ್ರುವರಿ 14ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸ್ವತಂತ್ರ ಕುಮಾರ್, ಸರ್ಕಾರ ಹಾಗೂ ಅಟರ್ನಿ ಜನರಲ್ ಅವರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.