ಈಗಿನ ಸುದ್ದಿ

ಅರುಣ್ ಜೇಟ್ಲಿ ವಿರುದ್ಧ ಮಾನನಷ್ಟ ಮೊಕದ್ದಮೆ

Published On :

ನವೆದೆಹಲಿ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ನಾಯಕ ಅರುಣ್ ಜೇಟ್ಲಿ ಹಾಗೂ ಪಿ.ಕೆ ಧುಮಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಖಾಸಗಿ ಕಂಪನಿಯೊಂದರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಅರುಣ್ ಜೇಟ್ಲಿ ಮತ್ತು ಧುಮಾಲ್ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ವೀರಭದ್ರ ಸಿಂಗ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ನಾನು ನಿರಪರಾಧಿಯಾಗಿದ್ದು, ಖಾಸಗಿ ಕಂಪನಿಯಿಂದ ಲಂಚ ಸ್ವೀಕರಿಸಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ವೀರಭದ್ರ ಸಿಂಗ್ ಹೇಳಿದ್ದಾರೆ.

ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ (ಸಂಸದೆ) ಚುನಾವಣೆಗೂ ಮುನ್ನ ಹಲವು ಪ್ರಮುಖ ವಿಚಾರಗಳನ್ನು ಮುಚ್ಚಿಟ್ಟಿದ್ದಾರೆ. ಕೋಟಿಗಟ್ಟಲೆ ಮೌಲ್ಯದ ವಿಚಾರವನ್ನು ಬಹಿರಂಗಪಡಿಸಿಲ್ಲ, ಕೇಂದ್ರ ಉಕ್ಕು ಸಚಿವರಾಗಿದ್ದ ವೇಳೆ ಸಿಂಗ್ ಅವರು ಖಾಸಗಿ ಉಕ್ಕು ಕಂಪನಿಯಿಂದ 2 ಕೋಟಿ ಲಂಚ ಪಡೆದಿದ್ದರು. ಇದಲ್ಲದೇ ಇನ್ನೂ ಅನೇಕ ಭ್ರಷ್ಟಾಚಾರಗಳಲ್ಲಿ ಅವರು ಪಾಲ್ಗೊಂಡಿದ್ದಾರೆ ಎಂದು ಬಿಜೆಪಿ ನಾಯಕ ಅನುರಾಗ್ ಠಾಕೂರ್ ಅರೋಪಿಸಿದ್ದರು.

ಸಿಂಗ್ ಅವರ ಭ್ರಷ್ಚಾಚಾರಗಳಿಗೆ ಸಂಬಂಧಿಸಿ ಬಿಜೆಪಿ ನಾಯಕ ಅರುಣ್ ಜೇಟ್ಲಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರ ಒಂದು ಪ್ರತಿಯನ್ನು ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾರಿಗೂ ಕಳುಹಿಸಿಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಸಿಬಿಐ ವೀರಭದ್ರಸಿಂಗ್ ಆಸ್ತಿ ಗಳಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.