ಪ್ರಿಯಾಂಕಾರಿಂದ ಸಹ ಕಾಂಗ್ರೆಸ್ ರಕ್ಷಣೆ ಅಸಾಧ್ಯ: ಮೇನಕಾ ಗಾಂಧಿ
ನವದೆಹಲಿ: ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿ ಅಥವಾ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿಗೆ ಕೂಡಾ ಕಾಂಗ್ರೆಸ್ನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಮೇನಾಕಾ ಗಾಂಧಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದ ಮೇನಕಾ, ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಭಾರತವನ್ನು ಲೂಟಿ ಮಾಡಿದೆ. ಕಾಂಗ್ರೆಸ್ ಅಧಿಕಾರದಿಂದ ಜನರು ಬೇಸತ್ತು ಹೋಗಿದ್ದು, ಮುಂದಿನ ಚುನಾವಣೆಯಲ್ಲಿ ಅವರು ಕಾಂಗ್ರೆಸ್ಗೆ ಮತ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿದ ಮೇನಕಾ, ಕಾಂಗ್ರೆಸ್ ಈಗ ಮುಳುಗುತ್ತಿರುವ ನೌಕೆ. ಈ ಹೊತ್ತಲ್ಲಿ ಯಾರಿಂದಲೂ ಅದನ್ನು ರಕ್ಷಿಸಲು ಸಾಧ್ಯವಿಲ್ಲ. ಭ್ರಷ್ಟಾಚಾರ ಮತ್ತು ಹಗರಣಗಳು ಪಕ್ಷದ ಸ್ವರೂಪವನ್ನೇ ಬದಲಿಸಿವೆ. ಪಕ್ಷದ ನಾಯಕರು ಈ ಎಲ್ಲ ವರ್ಷಗಳಲ್ಲಿ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಅವಸ್ಥೆ ಹೇಗಿದೆಯೆಂದರೆ, ರಾಹುಲ್ ಗಾಂಧಿ ಅಥವಾ ಆತನ ಸಹೋದರಿ ಪ್ರಿಯಾಂಕಾ ಗಾಂಧಿಯಿಂದಲೂ ಪಕ್ಷವನ್ನು ರಕ್ಷಿಸಲು ಆಗಲ್ಲ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ರಾಹುಲ್ಗೆ ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ನೀಡುವ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂದು ಕೇಳಿದಾಗ, ನಲ್ವತ್ತು ಕಳ್ಳರಿರುವ ಸಂಘದ ನಾಯಕತ್ವವನ್ನು ಅವರು ವಹಿಸಿರುವುದರಿಂದ, ಇದರಲ್ಲಿ ಯಾವುದೇ ಬದಲಾವಣೆಯಾಗಲ್ಲ ಎಂದು ಮೇನಕಾ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

