ಈಗಿನ ಸುದ್ದಿ

ರಾಹುಲ್ ನಾಯಕತ್ವ ವಿರೋಧಿಸುವವರು ಪಕ್ಷ ತೊರೆಯಲಿ: ಖುರ್ಷಿದ್

ರಾಹುಲ್ ನಾಯಕತ್ವ ವಿರೋಧಿಸುವವರು ಪಕ್ಷ ತೊರೆಯಲಿ: ಖುರ್ಷಿದ್
Published On :

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವುದಕ್ಕೆ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರ ವಿರೋಧ ಇದೆ ಎಂಬ ವರದಿಗಳ ನಡುವೆಯೇ, ರಾಹುಲ್ ಗಾಂಧಿಯ ನಾಯಕತ್ವ ವಿರೋಧಿಸುವವರು ಪಕ್ಷ ಬಿಟ್ಟು ಹೋಗಲಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಅವರು ಗುರುವಾರ ಹೇಳಿದ್ದಾರೆ. ಇದರೊಂದಿಗೆ ರಾಹುಲ್ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಧಾನ ಇದೆ ಎಂಬುದು ಸ್ಪಷ್ಟವಾಗಿದೆ.

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಮಾತನಾಡಿರುವ ಖುರ್ಷಿದ್, ಯಾರಿಗಾದರೂ ರಾಹುಲ್ ಗಾಂಧಿಯೊಂದಿಗೆ ಸಮಸ್ಯೆ ಇದ್ದರೆ, ಅಂತವರು ಪಕ್ಷ ತೊರೆಯಬಹುದು ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರೇ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ ಖುರ್ಷಿದ್, ಒಂದು ವೇಳೆ ರಾಹುಲ್ ನಾಯಕತ್ವ ಇಷ್ಟವಿಲ್ಲದಿದ್ದರೆ, ನೀವು ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅಗತ್ಯ ಇಲ್ವ. ನೀವು ಪಕ್ಷ ಬಿಟ್ಟಿ ಹೋಗಬಹುದು ಎಂದಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ನಡೆಯಲಿರುವ ಎಐಸಿಸಿ ಸಮಾವೇಶದಲ್ಲಿ ರಾಹುಲ್‌ಗಾಂಧಿ ಅವರಿಗೆ ಉನ್ನತ ಹುದ್ದೆ ನೀಡುವುದು ಖಚಿತ. ಆದರೆ, ಈ ವೇಳೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಜತೆಗೆ ಇತರೆ ಸಾಧ್ಯತೆಗಳ ಕುರಿತೂ ಪಕ್ಷ ಚಿಂತನೆ ನಡೆಸಿದೆ.

ಬೆಲೆ ಏರಿಕೆ, ಭ್ರಷ್ಟಾಚಾರದಿಂದಾಗಿ ದೇಶಾದ್ಯಂತ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಕಾಂಗ್ರೆಸ್‌ನ ವರ್ಚಸ್ಸೂ ಮಂಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈಗಲೇ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದರೆ ಮುಂಬರುವ ಚುನಾವಣೆಯಲ್ಲಿನ ಸೋಲಿನ ಹೊಣೆಯನ್ನು ರಾಹುಲ್ ಹೊರಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಪಕ್ಷ ಎಚ್ಚರಿಕೆಯ ಹೆಜ್ಜೆ ಇಡಲು ಉದ್ದೇಶಿಸಿದೆ. ಸದ್ಯದ ಸ್ಥಿತಿಯಲ್ಲಿ ಪಕ್ಷದ ಮುಂದೆ ಮೂರು ಆಯ್ಕೆಗಳಿವೆ. ಮೊದಲನೆಯದು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವುದು, ಎರಡನೆಯದು ಕಾರ್ಯಾಧ್ಯಕ್ಷರನ್ನಾಗಿ ನೇಮಿಸುವುದು, ಮೂರನೆಯದು ರಾಹುಲ್ ನೇತೃತ್ವದಲ್ಲಿ ಪ್ರಚಾರ ನಡೆಸುವುದು. ಹಾಗಾಗಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಬದಲು ಉಳಿದೆರಡರಲ್ಲಿ ಒಂದು ಆಯ್ಕೆಯನ್ನು ಪಕ್ಷ ಅಪ್ಪಿಕೊಂಡರೂ ಅಚ್ಚರಿ ಇಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.