ಈಗಿನ ಸುದ್ದಿ

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಿಸಲ್ಲ: ಸೋನಿಯಾ

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಿಸಲ್ಲ: ಸೋನಿಯಾ
Published On :

ನವದೆಹಲಿ: ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ತಮ್ಮ ಪುತ್ರ ರಾಹುಲ್ ಗಾಂಧಿ ಬಗ್ಗೆ ನಿನ್ನೆ ತೆಗೆದುಕೊಂಡ ನಿರ್ಣಯವೇ ಅಂತಿಮ ಎಂದು ಶುಕ್ರವಾರ ಹೇಳಿದ್ದಾರೆ.

ಇಂದು ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಸೋನಿಯಾ, ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದ್ದು, ಸಮಾಜವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಸಿಸಬೇಕು ಎಂಬ ಕಾಂಗ್ರೆಸ್ ಪ್ರತಿನಿಧಿಗಳ ಆಗ್ರಹವನ್ನು ಸಾರಾಸಗಟಾಗಿ ತಳ್ಳಿಹಾಕಿದ ಕಾಂಗ್ರೆಸ್ ವರಿಷ್ಠೆ, ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡುವುದಿಲ್ಲ. ರಾಹುಲ್‌ರನ್ನು 2014ರ ಲೋಕಸಭಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಿದ್ದು, ಅವರ ನೇತೃತ್ವದಲ್ಲಿ ತತ್ವ, ಸಿದ್ಧಾಂತಗಳನ್ನಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಕಳೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸೋಲಿನಿಂದ ನಾವು ಹತಾಶೆಗೊಂಡಿಲ್ಲ. ಕಾಂಗ್ರೆಸ್ ಪಕ್ಷ ಹಲವು ಸಂಕಷ್ಟಗಳನ್ನು ಎದುರಿಸಿದೆ. ಅದರಲ್ಲಿ ಇದೂ ಒಂದು. ಕಳೆದ ಹತ್ತು ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದರು.

ಯುಪಿಎ ಸರ್ಕಾರ ಜಾರಿಗೆ ತಂದ ಮಾಹಿತಿ ಹಕ್ಕು ಕಾಯಿದೆ ಜನಸಾಮಾನ್ಯರಿಗೆ ದೊರೆತ ದೊಡ್ಡ ಶಕ್ತಿ. ಅಲ್ಲದೆ ಆಹಾರ ಭದ್ರತಾ ಕಾಯಿದೆ ಮತ್ತು ಭೂ ಕಾಯಿದೆ ಕೂಡ ಬಡವರಿಗೆ ವರದಾನವಾಗಿದೆ ಎಂದು ಸೋನಿಯಾ ಯುಪಿಎ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ನಾವು ಏನು ಹೇಳುತ್ತೇವೋ ಅದನ್ನೆ ಮಾಡುತ್ತೇವೆ. ಪ್ರಬಲ ಲೋಕಪಾಲ ಮಸೂದೆ ಜಾರಿ ನಮ್ಮ ಬದ್ಧತೆಯಾಗಿತ್ತು. ಅದರಂತೆ ಭ್ರಷ್ಟಚಾರ ಮಟ್ಟಹಾಕಲು ನಾವು ಲೋಕಪಾಲ ಮಸೂದೆಯನ್ನು ಜಾರಿಗೊಳಿಸಿದ್ದೇವೆ. ಅಲ್ಲದೆ ಭ್ರಷ್ಟಾಚಾರ ತಡೆಯಲು ಇನ್ನಷ್ಟು ಕಾನೂನು ರೂಪಿಸುತ್ತೇವೆ ಎಂದು ಸೋನಿಯಾ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.