ಈಗಿನ ಸುದ್ದಿ

ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ: ರಾಹುಲ್

ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ: ರಾಹುಲ್
Published On :

ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಜನಸಾಮಾನ್ಯನಿಗೆ ಶಕ್ತಿ ತುಂಬಿದೆ. ಕಳೆದ ಹತ್ತು ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಹತ್ತು ವರ್ಷ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ರಾಹುಲ್ ಹೇಳಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ಮಹತ್ವದ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರುವ ಮೂಲಕ ಜನರಿಗೆ ಅಧಿಕಾರ ನೀಡಿದೆ. 'ಆಧಾರ್‌' ಮೂಲಕ ಜನರಿಗೆ ನೇರವಾಗಿ ಸಹಾಯಧನ ನೀಡುವುದರೊಂದಿಗೆ ಜನರ ದುಡ್ಡನ್ನು ಜನರ ಖಾತೆಗಳಿಗೆ ಮರಳಿಸಿದ್ದೇವೆ ಎಂದು ಯುಪಿಎ ಸರ್ಕಾರದ ಸಾಧನೆಗಳನ್ನು ರಾಹುಲ್ ವಿವರಿಸಿದರು.

ಪಕ್ಷದ ಕಾರ್ಯಕರ್ತರು ಸೈನಿಕರಿದ್ದಂತೆ ಎಂದ ರಾಹುಲ್ ಗಾಂಧಿ, 2014ರ ಲೋಕಸಭಾ ಚುನಾವಣೆಗೆ ತೆರಳಲು ಹೆಮ್ಮೆಯಿಂದ ಸಿದ್ಧರಾಗಿ ಎಂದು ಕರೆ ನೀಡಿದರು.

ಇದೇ ವೇಳೆ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧವೂ ಪರೋಕ್ಷ ವಾಗ್ದಾಳಿ ನಡೆಸಿದ ಯುವನಾಯಕ, ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.