ಈಗಿನ ಸುದ್ದಿ

ಬಂಗಾಳಿ ನಟಿ ಸುಚಿತ್ರಾ ಸೇನ್ ನಿಧನ

ಬಂಗಾಳಿ ನಟಿ ಸುಚಿತ್ರಾ ಸೇನ್ ನಿಧನ
Published On :

ಕೋಲ್ಕತಾ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ಬಂಗಾಳಿ ನಟಿ ಸುಚಿತ್ರಾ ಸೇನ್ ಅವರು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಸೇನ್ ಅವರಿಗೆ ಆರಂಭದಲ್ಲಿ ಎದೆಯ ಸೋಂಕು ಕಾಣಿಸಿಕೊಂಡಿದ್ದರಿಂದ ಡಿಸೆಂಬರ್ 23ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ 28ರಂದು ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಅಂದಿನಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು.

ದಶಕಗಳ ಕಾಲ ಬಂಗಾಳಿ ಸಿನಿಮಾವನ್ನು ಆಳಿದ ನಟಿ ಇಂದು ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ. ಅವರಿಗೆ 1963ರಲ್ಲಿ ಮಾಸ್ಕೋ ಚಲನಚಿತ್ರೋತ್ಸವದಲ್ಲಿ 'ಸಾತ್ ಪಾಕೆ ಬಂಧ' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿತ್ತು.

ದಕ್ಷಿಣ ಕೋಲ್ಕತಾದ ಅಪಾರ್ಟ್‌ಮೆಂಟ್ ಒಂದರಲ್ಲಿ ಏಕಾಂಗಿಯಾಗಿ ಜೀವಿಸುತ್ತಿದ್ದ ಸುಚಿತ್ರಾ ಸೇನ್, ಬಾಲಿವುಡ್‌ನ ದೇವದಾಸ್, ಆಂಧೀ ಮತ್ತು ಸಾತ್ ಪಾಕೇ ಬಂದಾ ಹಾಗೂ ಬಂಗಾಳಿಯ ಅಗ್ನಿ ಪರೀಕ್ಷಾ, ಸಪ್ತಪದಿ, ದೀಪ್ ಜ್ವೆಲೇ ಜಾಯ್ ಮುಂತಾದ ಅತ್ಯಂತ ಸ್ಮರಣಾರ್ಹ ಚಿತ್ರಗಳಲ್ಲಿ ನಟಿಸಿ ಜನಮನ ಸೆಳೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.