ದೆಹಲಿ ಸಿಎಂ ಕೇಜ್ರಿವಾಲ್ಗೆ 3 ಕೋಣೆಯ ಮನೆ

ನವದೆಹಲಿ: ಮನೆ ಹುಡುಕಾಟದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಲುಟೆನ್ಸ್ ಝೋನ್ನಲ್ಲಿರುವ ತಿಲಕ್ ಲೇನ್ ಅಪಾರ್ಟ್ಮೆಂಟ್ಸ್ನಲ್ಲಿ ಮೂರು ಬೆಡ್ ರೂಂ ಒಳಗೊಂಡ ಫ್ಲಾಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಗರಾಭೀವೃದ್ಧಿ ಸಚಿವಾಲಯ 3 ಬೆಡ್ ರೂಂ ಇರುವ ಮನೆಯನ್ನು ಅರವಿಂದ್ ಕೇಜ್ರಿವಾಲ್ಗೆ ನೀಡಿದೆ ಎಂದು ತಿಳಿದು ಬಂದಿದೆ.
ಗ್ರೌಂಡ್ ಫ್ಲೋರ್ನಲ್ಲಿ 1,600 ಚದರಡಿ ವಿಸ್ತೀರ್ಣದಲ್ಲಿ ಮನೆ ನಿರ್ಮಾಣವಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸೂಕ್ತವಾದ ಮನೆ ನೀಡುವಂತೆ ದೆಹಲಿ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು.
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮುಖ್ಯಮಂತ್ರಿಗಳ ಬಂಗಲೆಯನ್ನು ಪಡೆಯಲು ನಿರಾಕರಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಐದು ಕೋಣೆಗಳ ಸರ್ಕಾರಿ ಫ್ಲಾಟ್ ನೀಡಲಾಗಿತ್ತು. ಆದರೆ ಕೇಜ್ರಿವಾಲ್ ಅವರು ಇದನ್ನು ನಿರಾಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


