ಕೇಜ್ರಿವಾಲ್ ವಾಹನ ತಡೆದ ದೆಹಲಿ ಪೊಲೀಸರು

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಧರಣಿ ಮುಂದಾದ ಹಿನ್ನಲೆಯಲ್ಲಿ ಅವರ ವಾಹನವನ್ನು ದೆಹಲಿ ಪೊಲೀಸರು ತಡೆದಿದ್ದಾರೆ.
ಸೋಮವಾರ ದೆಹಲಿಯಲ್ಲಿರು ಕೇಂದ್ರ ಗೃಹ ಸಚಿವಾಲಯದ ನಾರ್ಥ್ ಬ್ಲಾಕ್ನಲ್ಲಿ ಧರಣಿ ನಡೆಸಲು ಮುಂದಾದ ಕೇಜ್ರಿವಾಲ್ ಅವರನ್ನು ರೈಲ್ ಭವನ್ ಎದುರು ತಡೆದು, ಪೊಲೀಸರು ಸುತ್ತುವರೆದಿದ್ದಾರೆ.
ತಮ್ಮ ಮಾತನ್ನು ಕೇಳಿಲ್ಲ ಎಂಬ ಹಿನ್ನಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತಗೊಳಿಸಿ ಎಂದು ಕೇಜ್ರಿವಾಲ್ ಅವರು ಕೇಂದ್ರಕ್ಕೆ ಒತ್ತಡ ಹೇರಿದ್ದರು. ಜನವರಿ 20ರೊಳಗೆ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದರು.
ಕೇಂದ್ರ ದೆಹಲಿಯಲ್ಲಿ ಹೆಚ್ಚುವರಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಆದರೆ ಇದರ ಬಗ್ಗೆ ಕೇಂದ್ರ ಯಾವುದೇ ಕ್ರಮ ಕೈಗೊಳ್ಳದಿರುವ ಪರಿಣಾಮ, ಕೇಜ್ರಿವಾಲ್ ಅವರು ಗೃಹ ಸಚಿವಾಲಯದ ಮುಂದೆ ಧರಣಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿ ಸಿಎಂ ಧರಣಿ ನಡೆಸದಂತೆ ಪೊಲೀಸರು ತಡೆಹಾಕುತ್ತಿದ್ದಾರೆ. ಧರಣಿ ಸ್ಥಳಕ್ಕೆ ತೆರಳದಂತೆ ಮಾಧ್ಯಮಗಳಿಗೆ ನಿರ್ಬಂಧ ಹಾಕಲಾಗಿದೆ. ದೆಹಲಿ ಸಚಿವರು ಧರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ. ಕೇವಲ ಕೇಜ್ರಿವಾಲ್ ಅವರಿಗೆ ಧರಣಿ ಅವಕಾಶ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಮುಂದೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


