ಈಗಿನ ಸುದ್ದಿ

ಆಪ್ ಶಾಸಕನಿಗೆ ಪೊಲೀಸರಿಂದ ಥಳಿತ

Published On :

ನವದೆಹಲಿ: ಭ್ರಷ್ಟ ಪೊಲೀಸರನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಸುತ್ತಿರುವ ಧರಣಿ ತಾರಕಕ್ಕೇರಿದ್ದು, ಈ ವೇಳೆ ಪೊಲೀಸರು ಆಮ್ ಆದ್ಮಿ ಪಕ್ಷದ ಶಾಸಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಸೋಮವಾರ ವರದಿಯಾಗಿದೆ.

ಆಮ್ ಆದ್ಮಿ ಪಕ್ಷ(ಎಎಪಿ)ದ ದೆಹಲಿಯ ಮಾಡೆಲ್ ಟೌನ್ ಶಾಸಕ ಅಖಿಲೇಶ್ ತ್ರಿಪಾಠಿಗೆ ಪೊಲೀಸರು ಥಳಿಸಿದ್ದಾರೆ. ಪೊಲೀಸರ ಈ ಕ್ರೌರ್ಯಕ್ಕೆ ಆಪ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈಲ್ ಭವನ್‌ನಲ್ಲಿ ಕೇಜ್ರಿವಾಲ್ ನಡೆಸುತ್ತಿರುವ ಧರಣಿಗೆ ಸಚಿವರು ಮತ್ತು ಆಪ್ ಶಾಸಕರು ಸಾಥ್ ನೀಡಿದ್ದರು. ಧರಣಿಯಲ್ಲಿ ಎಎಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದಿದ್ದರಿಂದ ಪ್ರತಿಭಟನೆಯ ಕಾವು ಜೋರಾಗಿತ್ತು. ಈ ವೇಳೆ ಆಪ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಅಲ್ಲದೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕೈ ಕೈಮಿಲಾಯಿಸುವವರೆಗೂ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.