ಜನಪ್ರಿಯ ಪ್ರಧಾನಿ ಅಭ್ಯರ್ಥಿ ಪಟ್ಟಿಯಲ್ಲಿ ನರೇಂದ್ರ ಮೋದಿ ನಂ.1

ನವದೆಹಲಿ: 2014ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಗಳ ಸಾಲಿನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಹೆಚ್ಚು ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ.
ಸಂಭಾವಿತ ಪ್ರಧಾನಿಗಾಧಿಗೆರುವ ಪಟ್ಟಿಯಲ್ಲಿ ಯಾರು ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ ಎಂಬುದರ ಕುರಿತಾಗಿ ಖಾಸಗಿ ಚಾನಲೊಂದು ನಡೆಸಿದ ಸರ್ವೇಯಲ್ಲಿ ನರೇಂದ್ರ ಮೋದಿ ಅವರು ಶೇ. 30 ರಷ್ಟು ಮತ ಪಡೆದು ಅಗ್ರ ಸ್ಧಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಶೇ. 15 ರಷ್ಟು ಮತ ಪಡೆದಿರುವ ಬಿಹಾರ್ ಮುಖ್ಯಮಂತ್ರಿ ನಿತೇಶ್ ಕುಮಾರ್ ಇದ್ದಾರೆ. ಆದರೆ ಕಾಂಗ್ರೆಸ್ನ ಭವಿಷ್ಯದ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾಗಿರುವ ರಾಹುಲ್ ಗಾಂಧಿ ಅವರು ಕೇವಲ 9 ರಷ್ಟು ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದರೆ ಸೋಜಿಗ ಸಂಗತಿ ಎಂದರೆ 2 ಬಾರಿ ಪ್ರಧಾನಿಯಾಗಿ ಆಡಳಿತ ನೀಡಿದ್ದ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕೇವಲ ಶೇ.1 ರಷ್ಟು ಮತ ಪಡೆದು ಕೊನೆಯ ಸ್ಥಾನಕ್ಕಿಳಿದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶೇ. 3ರಷ್ಟು ಮತ ಪಡೆದು ಪ್ರಧಾನಿ ಸಿಂಗ್ರನ್ನು ಹಿಂದಿಕ್ಕಿದ್ದಾರೆ.
ಕೇಂದ್ರದಲ್ಲಿ ಬಹುಮತ ಪಡೆದು ಪ್ರಧಾನಿ ಗದ್ದುಗೆ ಎರಲು ಎಲ್ಲಾ ರಾಜಕೀಯ ಪಕ್ಷಗಳು ಸರ್ಕಸ್ ನಡೆಸುತ್ತಿವೆ. ಆ ನಿಟ್ಟಿನಲ್ಲಿ ಕೆಲವೊಂದು ರಾಜಕೀಯ ಪಕ್ಷಗಳು ಚುನಾವಣೆಗೂ ಮುನ್ನ ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಈ ಸಾಲಿನಲ್ಲಿ ಬಿಜೆಪಿ ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರು ಹೆಸರನ್ನು ಘೋಷಿಸಿತ್ತು. ಮೋದಿ ಅವರ ಗಾಳಿ ಎಲ್ಲಾ ಗಡೆ ಉತ್ತಮವಾಗಿ ಬೀಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಬಿಹಾರ ಮತ್ತು ಹರಿಯಾಣದಲ್ಲಿ ಶೇ.40 ರಷ್ಟು ಸ್ಥಾನಗಳನ್ನು ಬಿಜೆಪಿ ಗಳಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಸರ್ವೇವಲ್ಲಿ ಬಹಿರಂಗವಾಗಿದೆ.
ಕಾಂಗ್ರೆಸ್ ಸಹ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಿಸಲಿತ್ತು. ಆದರೆ ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಇರುವುದರಿಂದ ಒಂದು ಪಕ್ಷ ಕಾಂಗ್ರೆಸ್ ಸೋತರೆ ಅದರ ಸಂರ್ಪೂಣ ಹೊಣೆಗಾರಿಕೆ ರಾಹುಲ್ ಹೊರಬೇಕಾಗುತ್ತದೆ ಎಂಬ ಕಾರಣಕ್ಕೆ ತನ್ನ ನಿಲುವನ್ನು ಕೈಬಿಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


