ನೂತನ ಸರ್ಕಾರದ ಆಡಳಿತ ವೈಖರಿ ಸಂತಸ ತಂದಿದೆ: ರಾಜ್ಯಪಾಲ

ಬೆಂಗಳೂರು: ಇಂದಿನಿಂದ ಆರಂಭಗೊಂಡ ವಿಧಾನಸಭೆಯ ಅಧಿವೇಶನದಲ್ಲಿ ರಾಜ್ಯಪಾಲ ಹಂಸ್ರಾಜ್ ಭಾರದ್ವಾಜ್ ಅವರು ಬುಧವಾರ ಪ್ರಸ್ತಾವಿಕ ಭಾಷಣ ಮಾಡಿದರು.
ಇಂದಿನಿಂದ ಆರಂಭಗೊಂಡು ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಮೊದಲ ದಿನದ ಅಧಿವೇಶನದಲ್ಲಿ ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವೇಳೆ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಆಡಳಿತ ನೀಡುತ್ತಿದೆ ಎಂದರು.
ಬಿಬಿಎಂಪಿ ವ್ಯಾಪ್ತಿಯ 110ಗ್ರಾಮಗಳಿಗೆ ಕಾವೇರಿ ನೀರು ಹರಿಸಲಾಗುವುದು. ಅಲ್ಲದೆ ರಾಜ್ಯದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ವಿರುದ್ಧ ಸರ್ಕಾರ ಹೆಚ್ಚೆತ್ತಿದ್ದು, ಮಹಿಳೆಯರ ವಿರುದ್ಧದ ಪ್ರಕರಣಗಳನ್ನು ತ್ವರಿತ ವಿಲೇವಾರಿ ಮಾಡಲಾಗುವುದು ಎಂದರು.
ನೂತನ ಆಡಳಿತ ವೈಖರಿಗೆ ಸಂತಸ ವ್ಯಕ್ತಪಡಿಸಿದ ರಾಜ್ಯಪಾಲರು, ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಶ್ರಮಿಸುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರು ಅಧಿಕ ಸಂಖ್ಯೆಯಲ್ಲಿ ಇರುವುದರಿಂದ ಅವರ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಲಿದೆ. ಅಲ್ಲದೆ ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ ಮತ್ತು ದುರ್ಬಲ ವರ್ಗದವರಿಗೆ ಹೆಚ್ಚಿನ ಆದ್ಯತೆ ನೀಡಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಪಾರದರ್ಶಕ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆ. ರಾಜ್ಯಾದ್ಯಂತ 10 ವಿಶೇಷ ಕೋರ್ಟ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಅಪರಾಧ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸುವ ಸಲುವಾಗಿ ವಿಶೇಷ ಕೋರ್ಟ್ಗಳ ಸ್ಥಾಪನೆಗೆ ಮುಂದಾಗಿದೆ ಎಂದರು.
ಆಹಾರ ಭದ್ರತೆ ಯೋಜನೆ ಫಲ ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ದೊರೆಯಬೇಕು. ಆ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ 10 ದಿನ ಪಡಿತರ ಚೀಟಿ ವಿತರಣೆ ಮಾಡಲಾಗುವುದು. ಈ ಕಾರ್ಯಕ್ರಮ ಫೆಬ್ರವರಿಯಿಂದಲೇ ಜಾರಿಗೆ ಬರಲಿದೆ ಎಂದರು.
ರಾಜ್ಯದಲ್ಲಿ ಅಂತರ್ಜಲ ಮಟ್ಟು ಸಹ ತೀವ್ರವಾಗಿ ಕುಸಿಯುತ್ತಿದೆ. ಹೀಗಾಗಿ 12 ಸಾವಿರ ಕೆರೆಗಳ ಪುನಶ್ಚೇತನ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


