ಚುನಾವಣೆ ನಂತರ ಸಂಸದರು ಆಯ್ಕೆ ಮಾಡಿದರೆ ಮಾತ್ರ ಪ್ರಧಾನಿಯಾಗುವೆ: ರಾಹುಲ್

ಅಮೇಥಿ: ಪಕ್ಷ ಪುನಃ ಅಧಿಕಾರಕ್ಕೆ ಬಂದು ಸಂಸದರು ನನ್ನನ್ನೇ ಆಯ್ಕೆ ಮಾಡಿದರೆ, ನಾನು ಪ್ರಧಾನಿ ಆಗುವ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.
ಅಮೇಥಿಯಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷ ಪುನಃ ಅಧಿಕಾರಕ್ಕೆ ಬಂದು ಸಂಸದರು ನನ್ನನ್ನೇ ಪ್ರಧಾನಿ ಎಂದು ಪರಿಗಣಿಸಿದರೆ ಆಗ ನಾನು ಪ್ರಧಾನಿಯಾಗಲು ಸಿದ್ಧ ಎಂದು ಹೇಳಿದರು.
ಅಮೇಥಿಯಲ್ಲಿ ನಡೆದ ಕಾಂಗ್ರೆಸ್ ರ್ಯಾಲಿ ವೇಳೆ ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಪಟ್ಟು ಹಿಡಿದ ಸಂದರ್ಭದಲ್ಲಿ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಪರಿಪಾಠ ಕಾಂಗ್ರೆಸ್ನಲಿಲ್ಲ. ಪ್ರಧಾನಿ ಮನಮೋಹನ್ ಸಿಂಗ್ರನ್ನು ಸಹ ಸಂಸದರೇ ಆಯ್ಕೆ ಮಾಡಿದ್ದರು.
ಕಾಂಗ್ರೆಸ್ನಲ್ಲಿ ಸಂಸದರೇ ಪ್ರಧಾನಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲದೆ ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿಯ ಘೋಷಣೆ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲ. ಹಾಗೆ ಮಾಡಿದರೆ ಅದು ವ್ಯಕ್ತಿ ಆರಾಧನೆಯಾಗುತ್ತದೆ ಎಂದು ರಾಹುಲ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇದನ್ನು ವಿರೋಧಿಸಿದ್ದರು. ಈ ವೇಳೆ ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಪರಿಪಾಠ ಕಾಂಗ್ರೆಸ್ನಲ್ಲಿ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಅಧಿಕಾರಕ್ಕೆ ಬಂದ ನಂತರವೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸೋನಿಯಾ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


