ಈಗಿನ ಸುದ್ದಿ

ಸಿಎಂ ಧರಣಿ ಮಾಡುವುದು ಅಸಂವಿಧಾನಿಕ ಅಲ್ಲ: ಕೇಜ್ರಿವಾಲ್

ಸಿಎಂ ಧರಣಿ ಮಾಡುವುದು ಅಸಂವಿಧಾನಿಕ ಅಲ್ಲ: ಕೇಜ್ರಿವಾಲ್
Published On :

ನವದೆಹಲಿ: ತೀವ್ರ ಟೀಕೆಗೆ ಕಾರಣವಾಗಿದ್ದ ತಮ್ಮ ಧರಣಿಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಮುಖ್ಯಮಂತ್ರಿಯೊಬ್ಬರು ಧರಣಿ ಮಾಡುವುದು ಅಸಂವಿಧಾನಿಕವಲ್ಲ ಎಂದು ಶನಿವಾರ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಚತ್ರಸಾಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, 'ನಾನು ಸಂವಿಧಾನದ ಬಗ್ಗೆ ತಿಳಿದುಕೊಂಡಿದ್ದೇನೆ. ಅಲ್ಲಿ ಧರಣಿ ಮಾಡುವುದು ಅಸಂವಿಧಾನಿಕ ಅಂತ ಎಲ್ಲೂ ಹೇಳಿಲ್ಲ' ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಪೊಲೀಸರ ವಿರುದ್ಧ ರೇಲ್ವೆ ಭವನದ ಎದುರು ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಎರಡು ದಿನ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಪ್ರತಿಭಟನೆಗೆ ಸುಪ್ರೀಕೋರ್ಟ್ ಸಹ ನಿನ್ನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ನಿಷೇಧಾಜ್ಞೆಯ ಹೊರತಾಗಿಯೂ ನಡೆದ ಪ್ರತಿಭಟನೆಯನ್ನು ನಿಯಂತ್ರಿಸದ ದೆಹಲಿ ಪೊಲೀಸರನ್ನು ಶುಕ್ರವಾರ  ಸುಪ್ರೀಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಜತೆಗೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಘಿಸಬಹುದೇ ಎಂದು ಪ್ರಶ್ನಿಸಿ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ಅನ್ನೂ ನೀಡಿದೆ.

ವಕೀಲ ಎಂ.ಎಲ್. ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ದೆಹಲಿ ಪೊಲೀಸರ ಕ್ರಮದ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.