ಗ್ಯಾಸ್ ದರ ಇಳಿಕೆಗೆ ಆಗ್ರಹಿಸಿ ಪ್ರತಿಭಟನೆ: ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಬೆಂಗಳೂರು: ಆಟೋ ಗ್ಯಾಸ್ ದರ ಇಳಿಕೆಗೆ ಆಗ್ರಹಸಿ ಆಟೋ ಚಾಲಕರು ಶನಿವಾರ ರಾಜಭವನ ಚಲೋ ಜಾಥಾ ನಡೆಸುತ್ತಿದ್ದು, ಈ ವೇಳೆ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
ಆನಂದ್ ರಾವ್ ಸರ್ಕಲ್ ಫ್ಲೈಓವರ್ ಮೇಲೆ ಸುಮಾರು 5 ಸಾವಿರ ಆಟೋ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆಟೋ ಚಾಲಕ ಲಕ್ಷ್ಮಿ ನಾರಾಯಣ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಲಕ್ಷ್ಮಿ ನಾರಾಯಣ್ ಅವರನ್ನು ಕೂಡಲೆ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ದರ ಇಳಿಕೆಗೆ ಆಗ್ರಹಿಸಿ ಆಟೋ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ರೈಲ್ವೇ ನಿಲ್ದಾಣದ ಮುಖ್ಯರಸ್ತೆಯಲ್ಲಿ ಕೆಲಕಾಲ ಆಟೋಗಳನ್ನು ನಿಲ್ಲಿಸಿ ಚಾಲಕರು ಪ್ರತಿಭಟನೆ ನಡೆಸಿದರು. ಆನಂತರ ಆನಂದ್ ರಾವ್ ಸರ್ಕಲ್ ಫ್ಲೈಓವರ್ ಮೂಲಕ ಚಾಲುಕ್ಯ ವೃತ್ತದ ಮುಖ್ಯರಸ್ತೆಯಿಂದ ರಾಜಭವನ ಪ್ರವೇಶಿಸಲಿದ್ದಾರೆ.
ರಾಜ್ಯಧಾನಿಯಲ್ಲಿ ಆಟೋ ಚಾಲಕರ ಪ್ರತಿಭಟನೆಯಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


