ಈಗಿನ ಸುದ್ದಿ

ಕ-ಲೋಕಾಯುಕ್ತದಲ್ಲಿ ಪ್ರಪ್ರಥಮ ಗಣರಾಜ್ಯೋತ್ಸವ ಸಂಭ್ರಮ

ಕ-ಲೋಕಾಯುಕ್ತದಲ್ಲಿ  ಪ್ರಪ್ರಥಮ ಗಣರಾಜ್ಯೋತ್ಸವ ಸಂಭ್ರಮ
Published On :

ಬೆಂಗಳೂರು: 65ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಇದೇ ಮೊದಲ ಬಾರಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಲೋಕಾಯುಕ್ತ ವೈ. ಭಾಸ್ಕರ್ ರಾವ್ ಅವರು ಧ್ವಜಾರೋಹಣ ಮಾಡಿದರು.

ಧ್ವಜಾರೋಹಣದ ನಂತರ ಮಾತನಾಡಿದ ಅವರು, ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಕರ್ನಾಟಕದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಜಾರಿಗೆ ತರಲಾಯಿತು. ಅಂದಿನಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತಕ್ಕ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಆ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಮಟ್ಟ ಹಾಕುವುದೇ ನಮ್ಮ ಉದ್ದೇಶ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ನಾವು ಬಿಡುವುದಿಲ್ಲ. ಅವರನ್ನು ಹಿಡಿದು ಅವರಿಗೆ ತಕ್ಕ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ ಎಂದು ಭಾಸ್ಕರ್ ರಾವ್ ಅವರು ಹೇಳಿದರು.

ಲಂಚ ತೊಗೆದುಕೊಳ್ಳುವುದು ಎಷ್ಟು ತಪ್ಪೋ, ಅದೇ ರೀತಿ ಲಂಚ ಕೊಡುವುದು ಅಕ್ಷಮ್ಯ. ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಜನತೆಯ ಸಹಕಾರದ ಅಗತ್ಯವು ಇದೆ ಎಂದರು.

ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತರು, ನಿಬಂಧಕರು, ಸಹಾಯಕ ನಿಬಂಧಕರು, ಆಡಳಿತ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.