ಮಹಿಳೆ ಸಾವಿಗೆ ಕಾರಣವಾದ 'ಫೇಸ್ ಬುಕ್'

ಕೊಚ್ಚಿ: ಖ್ಯಾತ ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ತನ್ನ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ್ದರಿಂದ ತೀವ್ರವಾಗಿ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ವಿದ್ರಾವಕ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಕೇರಳದ ಕೊಚ್ಚಿಯ ನಿವಾಸಿಯಾಗಿದ್ದ 27 ವರ್ಷದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಹಿಳೆಯ ಸಾವಿಗೆ ಎದುರು ಮನೆಯ ಯುವಕನೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ಆತ ಫೇಸ್ ಬುಕ್ ನಲ್ಲಿ ಆಕೆಯ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದನು ಎಂದು ಆರೋಪಿಸಿದ್ದಾರೆ.
ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೀಡಾದ ಮಹಿಳೆ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಳು. ಆದರೆ ಕೊಚ್ಚಿ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು. ನಂತರ ಮಹಿಳೆ ಹೈಕೋರ್ಟ್ನಲ್ಲಿ ಈ ಕುರಿತಂತೆ ದೂರು ದಾಖಲಿಸಿದಳು. ಮಹಿಳೆಯ ದೂರು ದಾಖಸಿಕೊಂಡ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಕೊಚ್ಚಿ ಪೊಲೀಸರಿಗೆ ಸೂಚಿಸಿತ್ತು.
ಆದರೆ ಮತ್ತೆ ಅಂತಹುದೇ ಲೇಖನಗಳು ಮತ್ತೆ ಫೇಸ್ ಬುಕ್ ನಲ್ಲಿ ಪ್ರಕಟವಾದ ಹಿನ್ನಲೆಯಲ್ಲಿ ಮಹಿಳೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


