ಸಿದ್ದು ಸರ್ಕಾರ ಸಂಪೂರ್ಣ ವಿಫಲ: ಶೆಟ್ಟರ್ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಮಂಗಳವಾರ ಹೇಳಿದರು.
ರಾಜ್ಯ ಸರ್ಕಾರದ ಆಡಳಿತ ಯಂತ್ರ ಕುಸಿದು ಬಿದ್ದಿರುವ ಕುರಿತು ವಿಧಾನಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 'ಬುದ್ದಿ ಜೀವಿಗಳು ಮತ್ತು ರಾಜ್ಯದ ಜನತೆಯ ವಿರೋಧದ ನಡುವೆಯೂ ಸಿದ್ದರಾಮಯ್ಯ ಅವರು ಕಳಂಕಿತ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರು. ಇದೀಗ ರಾಜ್ಯ ಸರ್ಕಾರದ ಆಡಳಿತ ಯಂತ್ರ ನಿಷ್ಕ್ರಿಯಗೊಂಡಿದೆ. ಅಧಿಕಾರಿಗಳು ಮತ್ತು ಸಚಿವರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ'.
ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲೇ ಬೇಕಾದ ಅನಿವಾರ್ಯತೆ ಸಿದ್ದರಾಮಯ್ಯ ಅವರಿಗಿದೆ. ರಾಜ್ಯ ಸರ್ಕಾರ ಸ್ಪಂದಿಸು ಸಾಮರ್ಥ್ಯವನ್ನೇ ಕಳೆದುಕೊಂಡಿದೆ ಎಂದು ಶೆಟ್ಟರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


