ಆಪ್ ಮುಖಂಡರು ಪಕ್ಷದ ನಿಧಿ ಮಾಹಿತಿ ಒದಗಿಸುತ್ತಿಲ್ಲ: ಕೇಂದ್ರ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ ಮುಖಂಡರು ಪಕ್ಷಕ್ಕೆ ಬರುತ್ತಿರುವ ದೇಣಿಗೆಯ ಬಗ್ಗೆ ಯಾವುದೇ ಮಾಹಿತಿ ಒದಗಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ಗೆ ಬುಧವಾರ ಹೇಳಿದೆ.
ಪಕ್ಷದ ಬ್ಯಾಂಕ್ ಖಾತೆ ಸೇರಿ ಮತ್ತಿತರ ಮಾಹಿತಿ ಒದಗಿಸುವಂತೆ ಕೋರಿ ಕಳೆದ ನವೆಂಬರ್ 4 ರಂದು ಆಪ್ಗೆ ಪತ್ರ ಬರೆದಿದ್ದೇವು. ಆದರೆ ಇಲ್ಲಿಯವರೆಗೂ ಪಕ್ಷದ ಯಾವ ಮುಖಂಡರಿಂದಲೂ ಉತ್ತರ ಬಂದಿಲ್ಲ ಎಂದು ದೆಹಲಿ ಹೈಕೋರ್ಟ್ಗೆ ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜೀವ್ ಮೆಹ್ರ ಅವರು ತಿಳಿಸಿದ್ದಾರೆ.
ಕಾನೂನಿಗೆ ವಿರುದ್ಧವಾಗಿ ವಿದೇಶಿ ದೇಣಿಗೆ ಪಡೆದ ಆರೋಪದಲ್ಲಿ, ಕೇಜ್ರಿವಾಲ್ ಸೇರಿದಂತೆ ಎಎಪಿ ಸದಸ್ಯರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣದಲ್ಲಿ ಎಎಪಿಯನ್ನು ಪ್ರತಿವಾದಿಯಾನ್ನಾಗಿ ಮಾಡಿ ಎಂದು ಅರ್ಜಿದಾರ ಎಂ.ಎಲ್. ಶರ್ಮಾ ಅವರಿಗೆ ಸೂಚಿಸಿದ್ದು, ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿದೆ.
ಎಎಪಿ ಸಹ ನೋಂದಾಯಿತ ರಾಜಕೀಯ ಪಕ್ಷವಾಗಿದೆ. ಅವರನ್ನು ಏಕೆ ನೀವು ಪ್ರತಿವಾದಿಯಾಗಿ ಮಾಡಿಲ್ಲ? ಮುಂದಿನ ವಿಚಾರಣೆ ಫೆ. 5ರೊಳಗೆ ಕೋರ್ಟ್ಗೆ ತಿದ್ದುಪಡಿ ಜ್ಞಾಪನಪತ್ರ ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿದೆ.
ಈ ಮುಂಚೆ ವಕೀಲ ಎಂ.ಎಲ್ ಶರ್ಮಾ ಸಲ್ಲಿಸಿದ್ದ ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಎಎಪಿ ಪಕ್ಷಕ್ಕೆ ಬಂದಿರುವ ದೇಣಿಗೆಯ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿತ್ತು. ಅಲ್ಲದೆ ವಿದೇಶಿ ದೇಣಿಗೆ ಸಂಗ್ರಹದಲ್ಲಿ ಆಪ್ ಕಾನೂನು ಉಲ್ಲಂಘಿಸಿದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

