ಈಗಿನ ಸುದ್ದಿ

ಖೋಟಾನೋಟು ಪ್ರಕರಣ: ಬಂಧಿತ 6 ಮಂದಿಯ ಅಪರಾಧ ಸಾಬೀತು

ಖೋಟಾನೋಟು ಪ್ರಕರಣ: ಬಂಧಿತ 6 ಮಂದಿಯ ಅಪರಾಧ ಸಾಬೀತು
Published On :

ಮುಂಬೈ: ನಕಲಿ ನೋಟು ಚಲಾವಣೆ ಪ್ರಕರಣದಲ್ಲಿ 2009ರಲ್ಲಿ ಬಂಧಿತರಾಗಿದ್ದ 6 ಆರೋಪಿಗಳನ್ನು ಅಪರಾಧಿಗಳು ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

2009ರ ಮೇ ತಿಂಗಳಲ್ಲಿ ನಕಲಿ ನೋಟುಗಳನ್ನು ಮುದ್ರಣ ಮಾಡಿ ಚಲಾವಣೆ ಮಾಡುವಾಗ ಬಂಧಿತರಾಗಿದ್ದ ಅಬ್ದುಲ್ ಶೇಖ್, ಮಹಮದ್ ಐಜುಲ್, ರವಿ ಧಿರೆನ್ ಗೋಷ್, ನೂರುದ್ದೀನ್ ಬರಿ, ಮಹಮದ್ ಸಮದ್ ಮತ್ತು ಐಜುಲ್ ಶೇಖ್ ಎಂಬುವರನ್ನು ನ್ಯಾಯಾಲಯ ಅಪರಾಧಿಗಳೆಂದು ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾ.ಪೃಥ್ವಿರಾಜ್ ಚೌಹ್ವಾಣ್ ಅವರು ತೀರ್ಪು ನೀಡಿದ್ದಾರೆ.

ಖೋಟಾನೋಟುಗಳನ್ನು ಮುದ್ರಣ ಮಾಡಿ ದೇಶಾದ್ಯಂತ ಅವ್ಯಾಹತವಾಗಿ ಚಲಾವಣೆ ಮಾಡತ್ತಿದ್ದ ಈ ತಂಡವನ್ನು 2009ರ ಮೇ 14ರಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದರು. ಅಲ್ಲದೆ 1 ಸಾವಿರ ಮುಖ ಬೆಲೆ ಸುಮಾರು 75 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳ ವಿರುದ್ಧ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ ಧಕ್ಕೆ, ಭಯೋತ್ಪಾದನಾ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಟಿಎಸ್ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ 2009ರ ಜೂನ್ 19ರಂದು ಎನ್‌ಐಎಗೆ ತನಿಖೆಯ ಜವಾಬ್ದಾರಿ ಹೊರಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ 2012 ಡಿಸೆಂಬರ್ ನಲ್ಲಿ ನಡೆದಿದ್ದ ವಿಚಾರಣೆಯಲ್ಲಿ ಎನ್‌ಐಎ ನ್ಯಾಯಾಲಯ ಸುಮಾರು 39 ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿತ್ತು. ಇದೀಗ ಪ್ರಕರಣದ ತನಿಖೆ ಪೂರ್ಣಗೊಂಡು ಎಲ್ಲ ಆರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಲಾಗಿದೆ. ನಾಳೆ ಈ ಎಲ್ಲ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.