ಕೃಷ್ಣಮೃಗ ಭೇಟೆ: ಮಾರ್ಚ್10ಕ್ಕೆ ವಿಚಾರಣೆ ಮುಂದೂಡಿಕೆ

ಜೋಧ್ಪುರ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣದ ವಿಚಾರಣೆಯನ್ನು ಜೋಧ್ಪುರ ನ್ಯಾಯಾಲಯ ಮಾರ್ಚ್ 10ಕ್ಕೆ ಮುಂದೂಡಿದೆ.
ಪ್ರಕರಣ ಸಂಬಂಧ ಜೋಧ್ಪುರದಲ್ಲಿ ಇಂದು ಬೆಳಗ್ಗೆ ಆರಂಭಗೊಂಡಿದ್ದ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿತ್ತು. ಮತ್ತೆ 2.30ಕ್ಕೆ ವಿಚಾರಣೆ ಆರಂಭಿಸಿದ ನ್ಯಾಯಾಲಯ, ಉಭಯ ವಕೀಲರ ವಿಚಾರಣೆಯನ್ನು ಆಲಿಸಿ ವಿಚಾರಣೆಯನ್ನು ಮಾರ್ಚ್ 10ಕ್ಕೆ ಮುಂದೂಡಿದೆ. ಈ ಹಿಂದೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನಟ ಸಲ್ಮಾನ್ ಖಾನ್ ಗೆ ಸಮನ್ಸ್ ಜಾರಿ ಮಾಡಿತ್ತು.
ಹೀಗಾಗಿ ಪ್ರಕರಣದ ಇಂದಿನ ವಿಚಾರಣೆಗಾಗಿ ನಟ ಸಲ್ಮಾನ್ ಖಾನ್ ಅವರು ಖುದ್ದುಹಾಜರಾಗಿದ್ದರು. 1998ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟ ಸಲ್ಮಾನ್ ಖಾನ್ ಅವರು ಚಿತ್ರತಂಡದೊಂದಿಗೆ ಸೇರಿ ಜೋಧ್ಪುರದ ರಕ್ಷಿತಾರಣ್ಯದಲ್ಲಿ 2 ಕೃಷ್ಣ ಮೃಗಗಳನ್ನು ಭೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51, 52 ಮತ್ತು ಐಪಿಸಿ ಸೆಕ್ಷನ್ 149ರ ಅಡಿಯಲ್ಲಿ ದೂರು ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


