ಜಯಾ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದಾಯ ತೆರಿಗೆ ಸಲ್ಲಿಸದಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅವರ ವಿರುದ್ಧ ಗುರುವಾರ ವಿಚಾರಣೆಗೆ ಆದೇಶಿಸಿದೆ.
ಜಯಾ ಪಾಲುದಾರಿಕೆಯ ಶಶಿ ಎಂಟರ್ಪ್ರೈಸಸ್ 1991-92, 1992-93 ಮತ್ತು 1993-94ರಲ್ಲಿ ಸತತ ಮೂರು ವರ್ಷ ಆದಾಯ ತೆರಿಗೆ ಸಲ್ಲಿಸಿಲ್ಲ. ಈ ಸಂಬಂಧ ಜಯಾಲಲಿತಾ ಅವರನ್ನು ಮತ್ತು ಅವರ ಆಪ್ತೆ ಶಶಿಕಲಾ ಇಬ್ಬರನ್ನೂ ವಿಚಾರಣೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾ.ಕೆ.ಎಸ್.ರಾಧಾಕೃಷ್ಣನ್ ನೇತೃತ್ವದ ಸುಪ್ರೀಂ ಪೀಠ, ನಾಲ್ಕು ತಿಂಗಳಲ್ಲಿ ಈ ಇಬ್ಬರ ವಿಚಾರಣೆ ನಡೆಸುವಂತೆ ವಿಚಾರಣಾಧೀನ ನ್ಯಾಯಾಲಕ್ಕೆ ಸೂಚಿಸಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ತಮಿಳುನಾಡು ಸಿಎಂ ಜಯಾಲಲಿತಾ ಹಾಗೂ ಅವರ ಆಪ್ತೆ ಶಶಿಕಲಾ ವಿರುದ್ಧ ಚೆನ್ನೈ ಆರ್ಥಿಕ ಅಪರಾಧಗಳ ನ್ಯಾಯಾಲಯ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಆದಾಯ ತೆರಿಗೆ ಸಲ್ಲಿಸದಿರುವುದು ದೊಡ್ಡ ತಪ್ಪು ಮತ್ತು ಈ ಸಂಬಂಧ ವಿಚಾರಣೆಗೆ ಕೋರ್ಟ್ಗೆ ಹಾಜರಾಗದಿರುವುದು ಕೂಡ ತಪ್ಪು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


