ಈಗಿನ ಸುದ್ದಿ

ಸಿಬಿಐ: ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್: ದೀದಿ

ಸಿಬಿಐ: ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್: ದೀದಿ
Published On :

ಕೊಲ್ಕತಾ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೊಸ ವ್ಯಾಖ್ಯಾನ ನೀಡಿದ್ದಾರೆ.

ಕೊಲ್ಕತಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಲೇವಡಿ ಮಾಡಿದ್ದಾರೆ. 2007ರ ನಂದಿಗ್ರಾಮ ಹಿಂಸಾಚಾರದ ಹಿನ್ನಲೆಯಲ್ಲಿ ಮಾತನಾಡಿದ ಅವರು, 'ಸಿಬಿಐ ಕಾಂಗ್ರೆಸ್ ಪಕ್ಷದ ಅಧೀನ ಸಂಸ್ಥೆಯಂತೆ ಕೆಲಸ ಮಾಡುತ್ತಿದ್ದು, ಅದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಅಲ್ಲ ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್‌'.

'ಅದು ಕೇವಲ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳ ಪರವಾಗಿಯೇ ತನಿಖೆ ನಡೆಸುತ್ತದೆ. ಹೀಗಾಗಿಯೇ 2007ರ ನಂದಿಗ್ರಾಮ ಹಿಂಸಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಅದು ಕ್ಲೀನ್ ಚಿಟ್ ನೀಡಿದೆ. ಆದರೆ ಕೇಂದ್ರ ಸರ್ಕಾರ ಒಂದು ಅಂಶವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ನಂದಿಗ್ರಾಮ ಪ್ರತಿಭಟನಾಕಾರರ ವಿರುದ್ಧ ಕೇಂದ್ರಸರ್ಕಾರ ಕ್ರಮಕ್ಕೆ ಮುಂದಾದರೆ ಜನತೆ ಖಂಡಿತಾ ಸರ್ಕಾರದ ವಿರುದ್ಧ ಬೀದಿಗಿಳಿಯುತ್ತಾರೆ' ಎಂದು ಮಮತಾ ಎಚ್ಚರಿಸಿದರು.

2007ರ ಮಾರ್ಚ್ 14ರಂದು ಮಿಡ್ನಾಪುರ ಜಿಲ್ಲೆಯ ನಂದಿಗ್ರಾಮದಲ್ಲಿ ಕೈಗಾರಿಕಾ ಚಟುವಟಿಕೆಗಾಗಿ ರೈತರ ಭೂಮಿ ವಶಪಡಿಸಿಕೊಳ್ಳುವ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಭಾರಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಂಭವಿಸಿದ ಹಿಂಸಾಚಾರ ನಿಯಂತ್ರಿಸಲು ಪೊಲೀಸರು 10 ಸುತ್ತು ಗುಂಡು ಹಾರಿಸಿದ್ದರು. ಘಟನೆಯಲ್ಲಿ ಪ್ರತಿಭಟನಾ ನಿರತ 14 ರೈತರು ಮೃತಪಟ್ಟು ಹಲವರು ಗಾಯಗೊಂಡಿದ್ದರು.

ಪ್ರಸ್ತುತ ಈ ಪ್ರಕರಣ ನ್ಯಾಯಾಲಯದಲ್ಲಿ ತನಿಖೆಯಾಗುತ್ತಿದ್ದು, ಸಿಬಿಐ ಸಂಸ್ಥೆ ತನಿಖೆಯ ಜವಾಬ್ದಾರಿ ಹೊತ್ತಿದೆ. ಈಗಾಗಲೇ ಹಲ್ದಿಯಾ ಕೋರ್ಟ್‌ನಲ್ಲಿ ಸಿಬಿಐ ಅಧಿಕಾರಿಗಳು ಚಾರ್ಜ್‌ಶೀಟ್ ದಾಖಲಿಸಿದ್ದು, ವಿಚಾರಣೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.