ಖ್ಯಾತ ಹಿನ್ನಲೆ ಗಾಯಕ ಬಪ್ಪಿ ಲಹಿರಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಖ್ಯಾತ ಹಿನ್ನಲೆ ಗಾಯಕ ಮತ್ತು ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಅವರು ರಾಜಕೀಯ ಅಖಾಡಕ್ಕಿಳಿದಿದ್ದು, ಶುಕ್ರವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಸೇರ್ಪಡೆಗೊಂಡಿದ್ದಾರೆ.
1980-90ರ ದಶಕದ ಮೆಲೋಡಿ ಕಿಂಗ್ ಸಂಗೀತ ನಿರ್ದೇಶಕ ಮತ್ತು ಗಾಯಕ ಬಪ್ಪಿ ಲಹಿರಿ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಬಪ್ಪಿ ಲಹಿರಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
2004ರ ಲೋಕಸಭಾ ಚುನಾವಣೆಯಲ್ಲಿ ಚಿತ್ರರಂಗದ ಸ್ಟಾರ್ ನಟರನ್ನು ಪಕ್ಷಕ್ಕೆ ಕರೆತಂದಿದ್ದ ಬಿಜೆಪಿ ಚುನಾವಣೆ ಗೆಲ್ಲುವ ಹುಮ್ಮಸ್ಸು ತೋರಿತ್ತು. ಆದರೆ 2004ರ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಬಹುಮತಗಳಿಸುವುದರೊಂದಿಗೆ ಬಿಜೆಪಿ ಯೋಜನೆಗಳೆಲ್ಲಾ ತಲೆಕೆಳಗಾಗಿ ಪ್ರತಿಪಕ್ಷದಲ್ಲಿ ಕೂರುವಂತಾಗಿತ್ತು. 10 ವರ್ಷಗಳ ನಂತರ ಇದೀಗ ಮತ್ತೆ ತನ್ನ ಹಳೆಯ ಯೋಜನೆಯನ್ನು ಬಿಜೆಪಿ ಕೈಗೆತ್ತಿಕೊಂಡಿದ್ದು, ಬಾಲಿವುಡ್ ದಿಗ್ಗಜ ನಟರನ್ನು ಮತ್ತು ಕ್ರೀಡಾಕ್ಷೇತ್ರದ ಪ್ರಮುಖರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಿಸುತ್ತಿದೆ.
ಹೀಗಾಗಿಯೇ ಸೌರವ್ ಗಂಗೂಲಿ, ಸಲ್ಮಾನ್ ಖಾನ್ ರಂತಹ ಗಣ್ಯರಿಗೆ ಬಿಜೆಪಿ ಗಾಳಹಾಕಿದೆ. ಇದಕ್ಕೆ ಪೂರಕವೆಂಬಂತೆ ಮುಂಬೈ ಪೊಲೀಸ್ ಆಯುಕ್ತರಾದ ಸತ್ಯಪಾಲ್ ಸಿಂಗ್ ಅವರು ಕೂಡ ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರು ಶೀಘ್ರದಲ್ಲಿಯೇ ಬಿಜೆಪಿ ಸೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ಬಿಜೆಪಿ ಪಕ್ಷದ ಈ ಯೋಜನೆ ಯಶಸ್ವಿಯಾಗಲಿದೆಯೇ ಅಥವಾ 2004 ರಂತೆಯೇ ವಿಫಲವಾಗಲಿದೆಯೇ ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


