ಚೆನ್ನೈ ಕಟ್ಟಡ ಕುಸಿತ: ಸಾವಿನ ಸಂಖ್ಯೆ 47ಕ್ಕೆ ಏರಿಕೆ

ಚೆನ್ನೈ: ಚೆನ್ನೈ ಹೊರವಲಯದ ಮೌಲಿವಾಕ್ಕಂನಲ್ಲಿ ಶನಿವಾರ ಸಂಭವಿಸಿದ್ದ 11 ಅಂತಸ್ತಿನ ನಿರ್ಮಾಣ ಹಂತದ ಕಟ್ಟದ ಕುಸಿತ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಕಳೆದ ಐದು ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿ ಇಂದು 4 ಮಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
ಕಟ್ಟದ ಅವಶೇಷಗಳಡಿ ಸಿಲುಕಿದ್ದವರ ಪೈಕಿ 26 ಮಂದಿಯನ್ನು ಇಲ್ಲಿಯವರೆಗೂ ರಕ್ಷಣೆ ಮಾಡಲಾಗಿದೆ. ವಿವಿಧ ಭದ್ರತಾ ಪಡೆಗಳಿಂದ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗುತ್ತಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರು ಮಂದಿ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಕಟ್ಟಡದ ಮಾಲೀಕ ಮನೋಹರ್ ಮತ್ತು ಆತನ ಪುತ್ರ ಮುತ್ತು ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಕಿ ಇಬ್ಬರು ಕಟ್ಟಡ ಕಾಮಗಾರಿ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಇಂಜಿನಿಯರ್ಗಳು ಎಂದು ತಿಳಿದುಬಂದಿದೆ. ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 304 (ಹತ್ಯಾ ಪ್ರಯತ್ನ)ರ ಅಡಿಯಲ್ಲಿ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


