ಈಗಿನ ಸುದ್ದಿ

ಸೌಲಭ್ಯಗಳಿಂದ ವಂಚಿತರಾದ ನೌಕರರು

Published On :

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಬರುವ 68 ರುದ್ರಭೂಮಿಗಳಲ್ಲಿ ಗುಂಡಿ ಅಗೆಯುವ ನೌಕರರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಪ್ರೋ.ಎಸ್.ವಿ. ನರಸಿಂಹಯ್ಯ ಅಗ್ರಹಿಸಿದ್ದಾರೆ.

ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರುದ್ರಭೂಮಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸರ್ಕಾರ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಇವರ ಕುರಿತಾಗಿ ಸರ್ಕಾರ ಮತ್ತು ಬಿಬಿಎಂಪಿ ಅಧಿಕಾರಿಗಳು ಜಾಣ ಕುರಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಬಿಬಿಎಂಪಿಯ ಇತರ ನೌಕರರಿಗಿರುವಂತೆ ರುದ್ರ ಭೂಮಿ ನೌಕರರಿಗೂ ಕೂಡ ಕನಿಷ್ಠ ವೇತನ, ಪಿ.ಎಫ್, ಇ.ಎಸ್.ಐ ಮತ್ತು ವಸತಿ ಸೌಲಭ್ಯ ಒದಗಿಸಬೇಕು. ನೌಕರರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ವಸತಿ ಯೋಜನೆಯಡಿಯಲ್ಲಿ ಮನೆ ನೀಡಬೇಕು. ಇಂದಿಗೂ ಕಾರ್ಮಿಕರು ಗುತ್ತಿಗೆ ನೌಕರರಾಗಿಯೇ ಉಳಿದಿದ್ದು, ಇವರನ್ನು ನಾಲ್ಕನೇಯ ದರ್ಜೆಯ ಖಾಯಂ ನೌಕರರನ್ನಾಗಿ ಮಾಡಬೇಕೆಂದು ಅವರು ನರಸಿಂಹಯ್ಯ ಅವರು ಆಗ್ರಹಿಸಿದರು.

ತಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ನಿವಾಸದ ಮುಂದೆಯೇ ಪ್ರತಿಭಟನಾ ಧರಣಿಯನ್ನೂ ಕೂಡ ಹಮ್ಮಿಕೊಳ್ಳಲಾಗುತ್ತದೆ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ವತಿಯಿಂದ ನರಸಿಂಹಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.