ಈಗಿನ ಸುದ್ದಿ

ಪ್ರಧಾನಿ ಕಾರ್ಯಾಲಯದ ನಿರ್ದೇಶಕರಾಗಿ ಸೆಲ್ವಕುಮಾರ್ ನೇಮಕ

ಪ್ರಧಾನಿ ಕಾರ್ಯಾಲಯದ ನಿರ್ದೇಶಕರಾಗಿ ಸೆಲ್ವಕುಮಾರ್ ನೇಮಕ
Published On :

ನವದೆಹಲಿ: ಪ್ರಧಾನಿ ಕಾರ್ಯಾಲಯದ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಎಸ್. ಸೆಲ್ವಕುಮಾರ್ ನೇಮಕಗೊಂಡಿದ್ದಾರೆ.

ಕೇಂದ್ರದಲ್ಲಿ ನೂತನ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉನ್ನತ ಮಟ್ಟದ ಸ್ಥಾನಗಳಿಗೆ ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದು, ಇದೀಗ ಪ್ರಧಾನಿ ಕಾರ್ಯಾಲದ ನಿರ್ದೇಶಕ ಸ್ಥಾನಕ್ಕೆ ಕರ್ನಾಟಕದ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿಕೊಂಡಿದೆ.

ಪ್ರಸ್ತುತ ಕರ್ನಾಟಕದಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ತಮಿಳುನಾಡು ಮೂಲದ ಸೆಲ್ವಕುಮಾರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಾಲಯದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

1997ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಲ್ವಕುಮಾರ್, ಪ್ರಸ್ತುತ ಅಮೆರಿಕಾದಲ್ಲಿ 1 ವರ್ಷದಿಂದ ಆಡಳಿತ ಸಂಬಂಧದ ತರಬೇತಿ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.