ಸುನಂದಾ ಪ್ರಕರಣ: ಡಾಕ್ಟರ್ಗೆ ಒತ್ತಡ ಹೇರಿಲ್ಲ -ಏಮ್ಸ್ ಸ್ಪಷ್ಟನೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಬಗ್ಗೆ ನಕಲಿ ಮರಣೋತ್ತರ ನೀಡುವಂತೆ ವೈದ್ಯರ ಮೇಲೆ ಒತ್ತಡ ಹೇರಲಾಗಿದೆ ಎಂಬ ಆರೋಪವನ್ನು ಏಮ್ಸ್ ತಳ್ಳಿ ಹಾಕಿದೆ.
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಮರಣೋತ್ತರ ವರದಿ ನೀಡಬೇಕು ಎಂದು ನನ್ನ ಮೇಲೆ ಒತ್ತಡ ಹಾಕಲಾಗಿತ್ತು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ವಿಧಿ ವಿಜ್ಞಾನ ಪ್ರಯೋಗಾಲಯದ ಮುಖ್ಯಸ್ಥರು ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ,ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಸುನಂದಾ ಸಾವಿನ ಪ್ರಕರಣ ಸಂಬಂಧ ವರದಿ ನೀಡುವಂತೆ ಏಮ್ಸ್ಗೆ ಸೂಚಿಸಿದ್ದರು.
ಇದಕ್ಕೆ ಪ್ರತಿಕ್ರಯಿಸಿರುವ ಏಮ್ಸ್, ವೈದ್ಯರ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಇದೊಂದು ಸುಳ್ಳು ಆರೋಪ ಎಂದು ಹೇಳಿದೆ.
ಮರಣೋತ್ತರ ವರದಿ ಬದಲಿಸುವಂತೆ ಸುಧೀರ್ ಗುಪ್ತಾ ಮೇಲೆ ಒತ್ತಡ ಹೇರಿಲ್ಲ. ನಕಲಿ ವರದಿ ನೀಡುವಂತೆ ಯಾವುದೇ ಅಧಿಕಾರ ದುರಪಯೋಗ ಪಡಿಸಿಕೊಂಡಿಲ್ಲ. ಗುಪ್ತಾ ಅವರ ಆರೋಪ ನಿರಾಧಾರವಾಗಿದೆ ಎಂದು ಏಮ್ಸ್ ವಕ್ತಾರ ತಿಳಿಸಿದ್ದಾರೆ.
ಪ್ರಸ್ತುತ ಗುಪ್ತಾ ಅವರು ರಜೆಯಲ್ಲಿ ತೆರಳಿದ್ದಾರೆ. ಅವರು ಎಲ್ಲೂ ನಾಪತ್ತೆಯಾಗಿಲ್ಲ.ಈ ರೀತಿ ಸುಳ್ಳು ಆರೋಪ ಮಾಡುತ್ತಿರುವ ಗುಪ್ತಾ ಅವರ ವಿರುದ್ಧ ಸಂಸ್ಥೆ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಮೂಲಗಳ ಪ್ರಕಾರ, ಏಮ್ಸ್ ನ ವೈದ್ಯ ಡಾ. ಸುಧೀರ್ ಗುಪ್ತಾ ಅವರು ಸುನಂದಾ ಪುಷ್ಕರ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು, 'ಇದು ಸಹಜ ಸಾವು' ಎಂದು ನಮೂದಿಸುವಂತೆ ತಮ್ಮ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹಾಕಿದ್ದರು ಎಂದು ಗುಪ್ತಾ ಅವರು ಆರೋಗ್ಯ ಸಚಿವಾಲಯ ಮತ್ತು ಕೇಂದ್ರ ಜಾಗೃತ ಆಯೋಗದ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ ತಾವು ಸಹಜ ಸಾವು ಎಂದು ನಕಲಿ ವರದಿ ನೀಡದೇ, ಅವರು ಡ್ರಗ್ಸ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇಲ್ಲವೆ ಡ್ರಗ್ಸ್ ನೀಡಿ ಹತ್ಯೆ ಮಾಡಲಾಗಿದೆ ಎಂದು ವರದಿ ನೀಡಿರುವುದರಿಂದ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು.
ಕಳೆದ ಜನವರಿ 17ರಂದು ದಕ್ಷಿಣ ದೆಹಲಿಯ ಹೋಟೆಲ್ವೊಂದರಲ್ಲಿ ಸುನಂದಾ ಪುಷ್ಕರ್ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


