ಈಗಿನ ಸುದ್ದಿ

ಗೋವಾ ರಾಜ್ಯಪಾಲ ಬಿ.ವಿ ವಾಂಚೂ ರಾಜಿನಾಮೆ

ಗೋವಾ ರಾಜ್ಯಪಾಲ ಬಿ.ವಿ ವಾಂಚೂ ರಾಜಿನಾಮೆ
Published On :

ನವದೆಹಲಿ: ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಸಿಬಿಐ ಅಧಿಕಾರಿಗಳು ಗೋವಾ ರಾಜ್ಯಪಾಲ ಬಿ.ವಿ ವಾಂಚೂ ಅವರನ್ನು ವಿಚಾರಣೆಗೊಳಪಡಿಸಿದ ಬೆನ್ನಲ್ಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಇನ್ನೂ ಮೂರು ವರ್ಷದ ಅಧಿಕಾರಾವಧಿ ಇರುವಂತೆಯೇ ಬಿ.ವಿ ವಾಂಚೂ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಇಂದು ಸಿಬಿಐ ಅಧಿಕಾರಿಗಳು ವಾಂಚೂ ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

ಬಹುಕೋಟಿ ವಿವಿಐಪಿ ಕಾಪ್ಟರ್ ಹಗರಣದಲ್ಲಿ ಪಶ್ಟಿಮ ಬಂಗಾಳ ರಾಜ್ಯಪಾಲ ಎಂ.ಕೆ. ನಾರಾಯಣನ್ ಹಾಗೂ ಬಿ.ವಿ ವಾಂಚೂ ಅವರನ್ನು ಸಿಬಿಐ ಅಧಿಕಾರಿಗಳು ಪ್ರಮುಖ ಸಾಕ್ಷಿಯಾಗಿ ಪರಿಗರಣಸಿದ್ದು, ಇದೇ ವಿಚಾರವಾಗಿ ಅವರ ವಿಚಾರಣೆಗೊಳಪಡಿಸಿದ್ದರು.

ಈ ಹಿಂದೆ ಪ್ರಕರಣಕ್ಕೆ ಸಂಬಂಧಸಿದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಎಂ.ಕೆ. ನಾರಾಯಣನ್ ಅವರನ್ನು ಸಿಬಿಐ ಕಳೆದ ಸೋಮವಾರ ವಿಚಾರಣೆಗೆ ಒಳಪಡಿಸಿತ್ತು. ಸಿಬಿಐ ವಿಚಾರಣೆ ನಂತರ ಇನ್ನೂ ಒಂದು ವರ್ಷದ ಅಧಿಕಾರ ಇರುವಂತೆಯೇ ನಾರಾಯಣನ್ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು.

ಕಾಪ್ಟರ್ ಹಗರಣ ಬೆಳಕಿಗೆ ಬಂದ ಬಳಿಕ ಒಪ್ಪಂದವನ್ನು ಕೇಂದ್ರ ಸರ್ಕಾರ ಅಮಾನತು ಮಾಡಿದ್ದು, ಈ ಸಂಬಂಧ ಈಗಾಗಲೇ ಇಟಲಿಯಲ್ಲಿ ಕೂಡ ಅಲ್ಲಿನ ಸರ್ಕಾರ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.