ಈಗಿನ ಸುದ್ದಿ

ವಿವಿಐಪಿ ಕಾಪ್ಟರ್ ಹಗರಣ: ಸಿಬಿಐನಿಂದ ಗೋವಾ ರಾಜ್ಯಪಾಲರ ವಿಚಾರಣೆ

ವಿವಿಐಪಿ ಕಾಪ್ಟರ್ ಹಗರಣ: ಸಿಬಿಐನಿಂದ ಗೋವಾ ರಾಜ್ಯಪಾಲರ ವಿಚಾರಣೆ
Published On :

ನವದೆಹಲಿ: ಬಹುಕೋಟಿ ವಿವಿಐಪಿ ಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಿಂತೆ ಸಿಬಿಐ ಅಧಿಕಾರಿಗಳು ಶುಕ್ರವಾರ ಗೋವಾ ರಾಜ್ಯಪಾಲ ಬಿ.ವಿ. ವಾಂಚೂ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಚುರುಕುಗೊಳಿಸಿರುವ ಸಿಬಿಐ ಇಂದು ಗೋವಾ ರಾಜ್ಯಪಾಲ ವಾಂಚೂ ಅವರನ್ನು ವಿಚಾರಣೆಗೊಳಪಡಿಸಿದ್ದು, ಅವರಿಂದ ಮಹತ್ವದ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

2012ರ ಮೇ ತಿಂಗಳಿನಿಂದ ಗೋವಾದ ರಾಜ್ಯಪಾಲರಾಗಿ ವಾಂಚೂ ಅವರು ಕಾರ್ಯನಿರ್ವಹಿಸುತ್ತಿದ್ದು, ಅವರ ಅಧಿಕಾರದವಧಿ 2017ರವರೆಗಿದೆ. ಆದರೆ ಇಂದು ಸಿಬಿಐ ವಿಚಾರಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ನಾರಾಯಣ್ ಅವರಂತೆ ಗೋವಾ ರಾಜ್ಯಪಾಲ ವಾಂಚೂ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿಂದೆ ಪ್ರಕರಣಕ್ಕೆ ಸಂಬಂಧಸಿದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಎಂ.ಕೆ. ನಾರಾಯಣನ್ ಅವರನ್ನು ಪ್ರಮುಖ ಸಾಕ್ಷಿಯಾಗಿ ಪರಿಗಣಿಸಿರುವ ಸಿಬಿಐ ಕಳೆದ ಸೋಮವಾರ ವಿಚಾರಣೆಗೆ ಒಳಪಡಿಸಿತ್ತು. ಸಿಬಿಐ ವಿಚಾರಣೆ ನಂತರ ಇನ್ನೂ ಒಂದು ವರ್ಷದ ಅಧಿಕಾರ ಇರುವಂತೆಯೇ ನಾರಾಯಣನ್ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು.

ಕಾಪ್ಟರ್ ಹಗರಣದ ವೇಳೆ ಅಂದರೆ 2010ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರದ ಭದ್ರತಾ ಸಲಹೆಗಾರರಾಗಿದ್ದರು. ಅಲ್ಲದೆ ಕಾಪ್ಟರ್ ಖರೀದಿ ಸಂಬಂಧ 2005ರಲ್ಲಿ ನಡೆದಿದ್ದ ತಾಂತ್ರಿಕ ಸಭೆಯಲ್ಲಿ ನಾರಾಯಣನ್ ಅವರು ಪಾಲ್ಗೊಂಡಿದ್ದರು. ಕಾಪ್ಟರ್ ಹಗರಣ ಬೆಳಕಿಗೆ ಬಂದ ಬಳಿಕ ಒಪ್ಪಂದವನ್ನು ಕೇಂದ್ರ ಸರ್ಕಾರ ಅಮಾನತು ಮಾಡಿದ್ದು, ಈ ಸಂಬಂಧ ಈಗಾಗಲೇ ಇಟಲಿಯಲ್ಲಿ ಕೂಡ ಅಲ್ಲಿನ ಸರ್ಕಾರ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.