ಈಗಿನ ಸುದ್ದಿ

ಪಂಚೋಲಿ ಕುಟುಂಬದಿಂದ ಜಿಯಾ ತಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ

ಪಂಚೋಲಿ ಕುಟುಂಬದಿಂದ ಜಿಯಾ ತಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ
Published On :

ಮುಂಬೈ: ಬಾಲಿವುಡ್ ನಟಿ ಜಿಯಾ ಖಾನ್ ತಾಯಿ ರಾಬಿಯಾ ಖಾನ್ ವಿರುದ್ಧ ಪಂಚೋಲಿ ಕುಟುಂಬಸ್ಥರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚೋಲಿ ಕುಟುಂಬದ ವಿರುದ್ಧ ನಿಂದನಿಯ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ರಾಬಿಯಾ ವಿರುದ್ಧ ಸೂರಜ್ ಪಂಚೋಲಿ ತಂದೆ ನಟ ಆದಿತ್ಯ, ತಾಯಿ ಜರಿನಾ ಮತ್ತು ಸೋದರಿ ಸನ ಮುಂಬೈ ಹೈ ಕೋರ್ಟ್‌ನಲ್ಲಿ 100ಕೋಟಿ ರು. ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಯುಕೆ ಮೂಲದ ರಾಬಿಯ ಅವರು ತಮ್ಮ ಟ್ವೀಟರ್‌ನಲ್ಲಿ ಕಳೆದ ಮಾರ್ಚ್ 4 ರಿಂದ ಮೇ 1ವರೆಗೆ ಸುಮಾರು 18 ಟ್ವೀಟ್‌ಗಳನ್ನು ಮಾಡಿದ್ದು, ಪಂಚೋಲಿ ಕುಟುಂಬದ ವಿರುದ್ಧ ಹಲವಾರು ಅವಹೇಳನಕಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಜಿಯಾ ಆತ್ಮಹತ್ಯೆ ಪ್ರಕರಣ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ರಾಬಿಯಾ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮುಂಬೈ ಹೈಕೋಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಅಲ್ಲದೆ ಜಿಯಾ ಖಾನ್ ಪ್ರಕರಣ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಪತ್ತೆ ಹಚ್ಚುವಂತೆ ಆದೇಶಿಸಿತ್ತು.

ರಾಬಿಯಾ ವಿರುದ್ಧ ಮುಂಬೈ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿದ್ದು, ಜೂನ್ 9ರಂದು ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಆದರೆ ಇಲ್ಲಿಯವರೆಗೆ ಯಾವುದೇ ಅಧಿಕೃತ ನೋಟಿಸ್ ಬಂದಿಲ್ಲ ಎಂದು ರಾಬಿಯಾ ಪರ ವಕೀಲ ದಿನೇಶ್ ತಿವಾರಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.