ಈಗಿನ ಸುದ್ದಿ

ವಿಪಕ್ಷ ನಾಯಕನ ಸ್ಥಾನ ಸಭಾಧ್ಯಕ್ಷರ ನಿರ್ಧಾರವೇ ಅಂತಿಮ: ವೆಂಕಯ್ಯ ನಾಯ್ಡು

ವಿಪಕ್ಷ ನಾಯಕನ ಸ್ಥಾನ ಸಭಾಧ್ಯಕ್ಷರ ನಿರ್ಧಾರವೇ ಅಂತಿಮ: ವೆಂಕಯ್ಯ ನಾಯ್ಡು
Published On :

ಹೈದರಾಬಾದ್‌: ಪ್ರತಿಪಕ್ಷದ ನಾಯಕ ಸ್ಥಾನ ನೀಡುವ ವಿಚಾರ ಲೋಕಸಭಾ ಸ್ಪೀಕರ್‌ ಮುಂದಿದ್ದು, ಸಭಾಧ್ಯಕ್ಷರ ನಿರ್ಧಾರಕ್ಕೆ ನಿರ್ಧಾರವೇ ಅಂತಿಮ.  ಅದಕ್ಕೆ ಪ್ರತಿಯೊಬ್ಬರು ವಿಧೇಯರಾಗಿ ಇರಬೇಕಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಭಾನುವಾರ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಹೈದರಾಬಾದ್‌ನಲ್ಲಿ ನಡೆದ ಜನಸಂಘ ಸಂಸ್ಥಾಪಕ ಶ್ಯಾಮ ಪ್ರಸಾದ್‌ ಮುಖರ್ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು, ‘ದಿವಂಗತ ನೆಹರೂ ಹಾಗೂ ಇಂದಿರಾ ಗಾಂಧಿ ಅವರ ಆಡಳಿತಾವಧಿಯಲ್ಲಿ ಪ್ರತಿಪಕ್ಷದ ನಾಯಕರು ಇರಲಿಲ್ಲ. ರಾಜೀವ್ ಗಾಂಧಿ ಅವರ ಅಧಿಕಾರಾವಧಿಯಲ್ಲೂ ಪ್ರತಿಪಕ್ಷದ ನಾಯಕರಿರಲಿಲ್ಲ. ಆದರೆ ಬಿಜೆಪಿ ಅಧಿಕಾರಾವಧಿಯಲ್ಲಿ ಪ್ರತಿಪಕ್ಷ ನಾಯಕರ ಸ್ಥಾನಮಾನ ನೀಡಲಾಗುತ್ತದೆ ಎಂದರು.

ಪ್ರತಿಪಕ್ಷ ನಾಯಕನ ಸ್ಥಾನಮಾನ ನೀಡುವ ವಿಚಾರ ಸಂವಿಧಾನಕ್ಕೆ ಸಂಬಂಧಿಸಿದ ವಿಷಯವಾಗಿದ್ದು,  ಸ್ಪೀಕರ್‌ ನಿರ್ಧಾರಕ್ಕೆ ವಿಧೇಯಕರಾಗಿ ಇರಬೇಕಿದೆ. ಸ್ಪೀಕರ್‌ ಅವರಿಗೆ ಕೆಲವೊಂದು ನಡವಳಿಕೆಗಳು, ನಿಯಮ ಹಾಗೂ ನಿಬಂಧನೆಗಳು, ಪೂರ್ವನಿದರ್ಶನಗಳು ಮತ್ತು ನಿರ್ದೇಶನಗಳಿವೆ. ಎಲ್ಲರೂ ಅವುಗಳನ್ನು ಅನುಸರಿಸಬೇಕು. ಸಭಾಧ್ಯಕ್ಷರು ಏನು ನಿರ್ಧಾರ ಕೈಗೊಳ್ಳುವರೋ ಕಾದು ನೋಡೋಣ’ ಎಂದು ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ವಿರೋಧ ಪಕ್ಷದ ಸ್ಥಾನದ ನಿರೀಕ್ಷಿಸುತ್ತಿರುವ ಕಾಂಗ್ರೆಸ್‌, ಅದನ್ನು ಪಡೆಯಲು ಕೋರ್ಟ್‌ ಮೆಟ್ಟಿಲೇರುವ ಬಗ್ಗೆಯೂ ಚಿಂತನೆ ನಡೆಸಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.