ಈಗಿನ ಸುದ್ದಿ

ಲೋಕಸಭೆ ಪ್ರತಿಪಕ್ಷ ಸ್ಥಾನಕ್ಕೆ ಸೋನಿಯಾ ಆಗ್ರಹ

ಲೋಕಸಭೆ ಪ್ರತಿಪಕ್ಷ ಸ್ಥಾನಕ್ಕೆ ಸೋನಿಯಾ ಆಗ್ರಹ
Published On :

ನವದೆಹಲಿ: ಲೋಕಸಭೆಯಲ್ಲಿ ನಮ್ಮ ಪಕ್ಷಕ್ಕೆ ಪ್ರತಿಪಕ್ಷ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಆಗ್ರಹಿಸಿದ್ದಾರೆ.

ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋನಿಯಾ, ಕಾಂಗ್ರೆಸ್‌ಗೆ ಪ್ರತಿಪಕ್ಷ ಸ್ಥಾನ ನೀಡಲೇ ಬೇಕು. ನಾವೇ ಏಕೈಕ ದೊಡ್ಡ ಪ್ರತಿಪಕ್ಷ. ಅಲ್ಲದೆ ನಾವು ಚುನಾವಣಾ ಪೂರ್ವ ಮೈತ್ರಿ ಹೊಂದಿರುವುದರಿಂದ ನಾವು ಅಧಿಕೃತ ಪ್ರತಿಪಕ್ಷವಾಗುವುದಕ್ಕೆ ಎಲ್ಲಾ ಅರ್ಹತೆ ಇದೆ ಎಂದು ಹೇಳಿದರು.

ಇದೇ ವೇಳೆ ಪ್ರತಿಪಕ್ಷ ಸ್ಥಾನ ಸಿಗದಿದ್ದರೆ, ಕೋರ್ಟ್ ಮೆಟ್ಟಿಲೇರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು, ಪ್ರತಿಪಕ್ಷದ ಸ್ಥಾನಮಾನ ನೀಡುವಂತೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಪಕ್ಷ ಇಂದು ಪತ್ರ ಬರೆದಿದ್ದು, ಪತ್ರದಲ್ಲಿ ಮಿತ್ರ ಪಕ್ಷಗಳ ಸಂಸದರು ಸೇರಿದಂತೆ ಒಟ್ಟು 60 ಸಂಸದರ ಸಹಿ ಇದೆ ಎಂದು ತಿಳಿಸಿದ್ದಾರೆ.

44 ಸಂಸದರನ್ನು ಹೊಂದಿರುವ ಕಾಂಗ್ರೆಸ್ ಲೋಕಸಭೆಯಲ್ಲಿ ಏಕೈಕ ಎರಡನೇ ಅತಿ ದೊಡ್ಡ ಪಕ್ಷವಾಗಿದೆ. ಆದರೆ ಯಾವುದೇ ಪಕ್ಷ ಅಧಿಕೃತ ಪ್ರತಿಪಕ್ಷವಾಗಬೇಕಾದರೆ ಲೋಕಸಭೆಯ ಶೇ.10ರಷ್ಟು, ಅಂದರೆ 55 ಸದಸ್ಯರನ್ನು ಹೊಂದಿರಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.