ಸಚಿವ ಡಿ.ಕೆ.ಶಿ ಬೆಂಬಲಿಗರಿಂದ ಹಲ್ಲೆ: ಮಹಿಳೆ ಆರೋಪ
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತಯಾಚನೆ ಮಾಡಲಿಲ್ಲವೆಂಬ ಕಾರಣಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ತಮ್ಮ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ನಾಗರತ್ನ ಎಂಬ ಮಹಿಳೆ ಆರೋಪಿಸಿದ್ದಾರೆ.
ಮೂಲತಃ ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕು, ಕನಕಪುರ ಟೌನ್ ನಿವಾಸಿಯಾದ ನಾಗರತ್ನಮ್ಮ ಅವರ ಕುಟುಂಬಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಅವರ ಸಂಬಂಧಿಕರಾದ ಕಾಂತರಾಜ್ ಹಾಗೂ ಅವರ ಸಹಚರರು ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರತ್ನಮ್ಮ ಅವರು, ತಮ್ಮ ಮಗನಾದ ಶ್ರೀಧರ್ ಹಾಗೂ ಕುಟುಂಬದ ಇತರೆ ಸದಸ್ಯರ ಮೇಲೆ ಕಾಂತರಾಜ್ ಅವರು ದೈಹಿಕ ಹಲ್ಲೆ ನಡೆಸಿ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೆ ತಮ್ಮ ರಾಜಕೀಯ ಪ್ರಭಾವ ಭೀರಿ ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಕನಕಪುರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರುಗಳನ್ನು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ಪೂರ್ವಾಪರ ವಿಚಾರ ಮಾಡದೇ ವಿನಾಕಾರಣ ನಮ್ಮನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೆ ತಮ್ಮ ಮಗನನ್ನು ಥಳಿಸಿದ್ದರು. ಇದೀಗ ಪೊಲೀಸರು ಪ್ರತಿನಿತ್ಯ ವಿಚಾರಣೆ ನೆಪದಲ್ಲಿ ನಮ್ಮವರನ್ನು ಥಳಿಸುತ್ತಿದ್ದು, ಇದರಿಂದ ನಮ್ಮ ಕುಟುಂಬ ಮಾನಸಿಕವಾಗಿ ಜರ್ಜರಿತವಾಗಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಕಾಂತರಾಜು ಸೇರಿದಂತೆ ಮುನಿಲಿಂಗಯ್ಯ, ಮರಿದೇವರು ಅಲಿಯಾಸ್ ಮರಿಯಪ್ಪ, ಮಹದೇವ ಅಲಿಯಾಸ್ ಗೂಳಿ ಮಾದೇವ, ಕುಮಾರ್ ಅಲಿಯಾಸ್ ಸಿದ್ದಪ್ಪ/ಬಡ್ಡಿ ಸಿದ್ಧ ಎಂಬುವವರ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಶೀಘ್ರದಲ್ಲಿಯೇ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ. ಎಫ್‌ಐಆರ್ ಪ್ರತಿ ಕೈಗೆ ಸಿಕ್ಕ ನಂತರ ಪುನಃ ಮಾಧ್ಯಮಗಳ ಮುಂದೆ ಬರುವುದಾಗಿ ನಾಗರತ್ನಮ್ಮ ಹೇಳಿದ್ದಾರೆ.
ನಮಗೂ ಸಾಮಾನ್ಯರಂತೆ ಬದುಕಲು ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

