ಈಗಿನ ಸುದ್ದಿ

ಎಚ್‌ಡಿಕೆ ಡೀಲ್: ಮಾಹಿತಿ ಕೇಳಿದ ಕೇಂದ್ರ, ಪ್ರತಿಕ್ರಿಯೆಗೆ ದೇವೇಗೌಡ ನಕಾರ

ಎಚ್‌ಡಿಕೆ ಡೀಲ್: ಮಾಹಿತಿ ಕೇಳಿದ ಕೇಂದ್ರ, ಪ್ರತಿಕ್ರಿಯೆಗೆ ದೇವೇಗೌಡ ನಕಾರ
Published On :

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಸಿದ ಡೀಲ್‌ನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಗೃಹ ಸಚಿವಾಲಯ, ಹಗರಣದ ಆಡಿಯೋ ಸಿಡಿ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ. ಆದರೆ ಸಿದ್ದರಾಮಯ್ಯ ಅವರು ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಮೇಲ್ಮನೆ ಸದಸ್ಯತ್ವಕ್ಕೆ ಕೋಟಿ ಕೋಟಿ ಹಣ ನೀಡಬೇಕು ಎಂಬ ಕುಮಾರಸ್ವಾಮಿ ಹೇಳಿಕೆಗೆ ನಿನ್ನೆ ಪ್ರತಿಕ್ರಿಯಿಸಿದ್ದ ಸಿಎಂ, ಕುಮಾರಸ್ವಾಮಿ ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಿದ್ದಾರೆ. ಬೆಕ್ಕು ಕಣ್ಣುಮಚ್ಚಿಕೊಂಡು ಹಾಲು ಕುಡಿದು, ತನ್ನ ಕೆಲಸ ಯಾರಿಗೂ ತಿಳಿಯುವುದಿಲ್ಲ ಎಂದುಕೊಳ್ಳುತ್ತದೆ. ಆ ರೀತಿ ಕುಮಾರಸ್ವಾಮಿ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಅದು ಯಾರಿಗೂ ಗೊತ್ತಾಗಿಲ್ಲ ಎಂದು ಭಾವಿಸಿದ್ದಾರೆ. ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದಿದ್ದರು.

ಪ್ರತಿಕ್ರಿಯೆಗೆ ದೇವಗೌಡ ನಕಾರ
ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಹಾಕಲು ನಮ್ಮ ಶಾಸಕರು ತಲಾ 1 ಕೋಟಿ ಕೇಳುತ್ತಿದ್ದಾರೆ ಎಂಬ ತಮ್ಮ ಪುತ್ರ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಪಕ್ಷದಿಂದ ಎಂಎಲ್‌ಸಿ ಆಗಲು 25 ಕೋಟಿ ರುಪಾಯಿ ಡಿಮಾಂಡ್ ಮಾಡಿದ ಹಾಗೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತ ಹಾಕಲು ಪಕ್ಷದ ಶಾಸಕರು 1 ಕೋಟಿ ಕೇಳುತ್ತಿದ್ದಾರೆ ಎಂದು ಪಕ್ಷ ನಾಯಕರ ಜೊತೆ  ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೊಳ್ಳುತ್ತಿರುವ ಧ್ವನಿಮುದ್ರಿತ ಸಿ.ಡಿ ಶನಿವಾರ ಬಹಿರಂಗವಾಗಿತ್ತು.

ತನಿಖೆಗೆ ಸಿದ್ದ: ಹೆಚ್.ಡಿ.ಕೆ

ಪ್ರಕರಣ ಸಂಬಂಧ ಈಗಾಗಲೇ ಭಯ ಹಾಗೂ ಹಿಂಜರಿಕೆ ಇಲ್ಲದೆಯೇ ಸ್ಪಷ್ಟೀಕರಣವನ್ನು ನೀಡಿದ್ದೇನೆ. ನಾನು ಮಾತನಾಡಿರುವುದು ಇತ್ತೀಚಿನ ರಾಜಕೀಯ ವಲಯದಲ್ಲಾಗುತ್ತಿರುವ ಪ್ರಚಲಿತ ವಿದ್ಯಾಮಾನ ಹಾಗೂ ಪ್ರಮಾಣೀಕರಣದ ಬಗ್ಗೆಯಷ್ಟೇ, ಕಲಾಪದಲ್ಲಿ ಯಾರಾದರೂ ಈ ವಿಷಯದ ಬಗ್ಗೆ ಚರ್ಚಿಸಿದರೆ ನಾನು ಚರ್ಚೆಗೆ ಸಿದ್ದನಿದ್ದು, ಪ್ರಕರಣ ಸಂಬಂಧ ಯಾವುದೇ ತನಿಖೆ ಎದುರಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.