21ನೇ ಶತಮಾನದ ಬಜೆಟ್: ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ರೈಲ್ವೇ ಸಚಿವ ಡಿ.ವಿ.ಸದಾನಂದಗೌಡ ಅವರು ಮಂಗಳವಾರ ಮಂಡಿಸಿದ ರೈಲ್ವೇ ಬಜೆಟ್ 21ನೇ ಶತಮಾನದ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ಸದಾನಂದಗೌಡ ಅವರ ಸತತ 1 ಗಂಟೆ 10 ನಿಮಿಷಗಳು ಸುದೀರ್ಘ ರೈಲ್ವೇ ಬಜೆಟ್ ಮಂಡನೆ ಬಳಿಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಸಕ್ತ ರೈಲ್ವೇ ಬಜೆಟ್ ಪಾರದರ್ಶಕತೆಯಿಂದ ಕೂಡಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ಪ್ರಮಾಣದ ಸಮಗ್ರ ಬಜೆಟ್ ಮಂಡಿಸಲಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
'ಪ್ರಸಕ್ತ ಬಜೆಟ್ 21ನೇ ಶತಮಾನದ ಬಜೆಟ್ ಆಗಿದ್ದು, ಸ್ವಾತಂತ್ರ್ಯಾ ನಂತರ ರೇಲ್ವೇ ಇಲಾಖೆ ಅಭಿವೃದ್ಧಿಯಾಗಿರಲಿಲ್ಲ. ಇಲಾಖೆಯ ಅಭಿವೃದ್ಧಿ ಇಂಜಿನ್ ಹಾಗೆಯೇ ಇದೆ. ಹೀಗಾಗಿ ಇಲಾಖೆಗೆ ಕಾಯಕಲ್ಪ ನೀಡುವುದು ಅವಶ್ಯಕ. ಪ್ರಸಕ್ತ ಬಜೆಟ್ ಸಂಪೂರ್ಣ ಪಾರದರ್ಶಕವಾಗಿದ್ದು, ಸಮಗ್ರ ಬಜೆಟ್ ಅನ್ನು ಇಂದು ಮಂಡನೆಯಾಗಿದೆ. ದೇಶದ ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ'.
'ದೇಶದ ರೈಲುಗಳ ವಿಸ್ತಾರ ಮತ್ತು ವಿಕಾಸವಾಗಬೇಕಿದೆ. ರೈಲ್ವೇ ಇಲಾಖೆಯ ಅಭಿವೃದ್ಧಿಯು ದೇಶದ ಆರ್ಥಿಕತೆಗೆ ಸಹಾಯಕವಾಗಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಡೀವಿ ರೈಲು ಬಜೆಟ್ಗೆ ರಾಹುಲ್ ಅಸಮಾಧಾನ
ಇದೇ ವೇಳೆ ಡಿ.ವಿ.ಸದಾನಂದಗೌಡ ಅವರು ಮಂಡಿಸಿದ ರೈಲ್ವೇ ಬಜೆಟ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಪ್ರಸಕ್ತ ಬಜೆಟ್ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. 'ಬಜೆಟ್ನಲ್ಲಿ ಹಲವು ರಾಜ್ಯಗಳನ್ನು ಕಡೆಗಣಿಸಲಾಗಿದ್ದು, ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಹಲವು ರಾಜ್ಯಗಳನ್ನು ಕಡೆಗಣಿಸಲಾಗಿದೆ. ಅಲ್ಲದೆ ಡಿ.ವಿ.ಸದಾನಂದಗೌಡ ಅವರ ಪ್ರಸಕ್ತ ಬಜೆಟ್ನಲ್ಲಿ ಯಾವುದೇ ದೂರದೃಷ್ಟಿ ಇಲ್ಲ. ಪ್ರಸಕ್ತ ಬಜೆಟ್ನಲ್ಲಿ ಘೋಷಣೆ ಮಾಡಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ' ಎಂದು ರಾಹುಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


