ಈಗಿನ ಸುದ್ದಿ

ಸಲ್ಮಾನ್ ಖಾನ್‌ಗೆ ಸುಪ್ರೀಂ ನೋಟೀಸ್

ಸಲ್ಮಾನ್ ಖಾನ್‌ಗೆ ಸುಪ್ರೀಂ ನೋಟೀಸ್
Published On :

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬುಧವಾರ ನೋಟೀಸ್ ಜಾರಿ ಮಾಡಿದೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ವಿರುದ್ಧದ ಕೃಷ್ಣಮೃಗ ಬೇಟೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಸಲ್ಮಾನ್ ಖಾನ್‌ಗೆ ನೋಟೀಸ್ ನೀಡಿದ್ದು, ನಾಲ್ಕು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.

1998ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟ ಸಲ್ಮಾನ್ ಖಾನ್ ಅವರು ಚಿತ್ರತಂಡದೊಂದಿಗೆ ಸೇರಿ ಜೋಧ್‌ಪುರದ ರಕ್ಷಿತಾರಣ್ಯದಲ್ಲಿ 2 ಕೃಷ್ಣ ಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ಸೈಫ್ ಅಲಿ ಖಾನ್, ಸೊನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 51, 52 ಮತ್ತು ಐಪಿಸಿ ಸೆಕ್ಷನ್ 149ರ ಅಡಿಯಲ್ಲಿ ದೂರು ದಾಕಲಾಗಿತ್ತು.

ಸೆಷನ್ಸ್ ನ್ಯಾಯಾಧೀಶರು ಸಲ್ಮಾನ್ ಖಾನ್ ಸೇರಿದಂತೆ ನಾಲ್ವರನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಹೈಕೋರ್ಟ್ ಸಹ ಇದನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ರಾಜಸ್ಥಾನದ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.