ಕಾಶಪ್ಪನವರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಪೇದೆಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಗುರುವಾರ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಕರ್ತವ್ಯ ನಿರತ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ಮಾಡಿರುವುದನ್ನು ಗಂಭೀರ ಆರೋಪ ಎಂದು ಪರಿಗಣಿಸಿ ಕಾಶಪ್ಪನವರ್ ಹಾಗೂ ರೌಡಿಶೀಟರ್ ಸೋಮಶೇಖರ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿರುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.
ಇದೇ ವೇಳೆ, ಈ ಇಬ್ಬರ ಮೇಲು ಹಲವಾರು ಗಂಭೀರ ಆರೋಪಗಳು ಇವೆ. ಅಲ್ಲದೆ ಸೋಮಶೇಖರ್ ಗೌಡ ಹೆಸರು ರೌಡಿಶೀಟರ್ ಲಿಸ್ಟ್ನಲ್ಲಿ ಇರುವುದರಿಂದ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ರೌಡಿಶೀಟರ್ ಸೋಮಶೇಖರ್ ಗೌಡ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಅವರ ಬಂಧನಕ್ಕೆ ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎಫ್ಐಆರ್ ಬಳಿಕ ತಲೆಮರೆಸಿಕೊಂಡಿರುವ ಸೋಮಶೇಖರ್ ಗೌಡ ತಮಿಳುನಾಡಿನಲ್ಲಿ ಇರುವ ಮಾಹಿತಿ ಸಿಕ್ಕಿದ್ದು, ತಮಿಳುನಾಡಿನಲ್ಲಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಶಾಸಕ ಕಾಶಪ್ಪನವರ್ ಬಂಧನ ಸದ್ಯಕ್ಕಿಲ್ಲ
ಕರ್ತವ್ಯ ನಿರತ ಪೊಲೀಸ್ ಪೇದೆಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶಪ್ಪನವರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದರು ಅವರನ್ನು ಸದ್ಯಕ್ಕೆ ಬಂಧಿಸಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಶಪ್ಪನವರಿಂದ ಹೇಳಿಕೆ ಪಡೆದುಕೊಂಡಿರುವುದರಿಂದ ಅವರನ್ನು ಬಂಧಿಸಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಸಿಸಿ ಕ್ಯಾಮರಾ ದೃಶ್ಯಾವಳಿಗನ್ನು ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಪ್ರಯೋಗಾಲಯದಿಂದ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ ೧ ರ ತಡ ರಾತ್ರಿ ಬೆಂಗಳೂರಿನ ಬಾರೊಂದರಲ್ಲಿ ಕಾಶಪ್ಪನವರ್ ಅವರು ಹುಟ್ಟು ಹಬ್ಬದ ಪಾರ್ಟಿ ನಡೆಸುತ್ತಿದ್ದು, ಈ ವೇಳೆ ಅಲ್ಲಿಗೆ ಬಂದ ಕರ್ತವ್ಯ ನಿರತ ಪೊಲೀಸ್ ಪೇದೆಗಳು ತಮ್ಮ ಮೊಬೈಲ್ನಲ್ಲಿ ಫೋಟೋ ತೆಗೆಯಲು ಮುಂದಾಗಿದ್ದಾರೆ. ಇದರಿಂದ ಕುಪಿತಗೊಂಡ ಶಾಸಕ ವಿಜಯಾನಂದ ಹಾಗೂ ಸೋಮಶೇಖರ ಗೌಡ ಹಾಗೂ ಬೆಂಬಲಿಗರು ಪೇದೆಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ಪೇದೆಗಳಾದ ಕಿರಣ್ ಹಾಗೂ ಪ್ರಶಾಂತ ನಾಯಕ್ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


