ಸುಪ್ರೀಂ ನ್ಯಾಯಮೂರ್ತಿಯಾಗಿ ಅಮಿತ್ ಶಾ ವಕೀಲ ಉದಯ್ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಹಾಗೂ ಬಿಜೆಪಿ ನೂತನ ಅಧ್ಯಕ್ಷ ಅಮಿತ್ ಶಾ ಅವರ ವಕೀಲ ಉದಯ್ ಲಲಿತ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕೇಂದ್ರ ಸರ್ಕಾರ ಶುಕ್ರವಾರ ನೇಮಕ ಮಾಡಿದೆ.
ಈ ಹಿಂದೆ ಈ ಸ್ಥಾನಕ್ಕೆ ಮಾಜಿ ಸಾಲಿಸಿಟರ್ ಜನರಲ್ ಗೋಪಾಲ ಸುಬ್ರಹ್ಮಣ್ಯಂ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಆದರೆ ಮೋದಿ ಸರ್ಕಾರ ಈ ಹೆಸರನ್ನು ತಿರಸ್ಕರಿಸಿತ್ತು. ಈಗ ಆ ಸ್ಥಾನಕ್ಕೆ ಕೇಂದ್ರ ಸರ್ಕಾರ ಮತ್ತೊಬ್ಬ ನ್ಯಾಯವಾದಿ ಉದಯ್ ಲಲಿತ್ ಅವರನ್ನು ನೇಮಕ ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಎಂ ಲೋಧಾ ನೇತೃತ್ವದ ಸಮಿತಿ, ಉದಯ್ ಲಲಿತ್ ಸೇರಿದಂತೆ ಇತರೆ ಮೂವರು ನ್ಯಾಯವಾದಿಗಳ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಉದಯ್ ಲಲಿತ್ ಅವರು 2ಜಿ ಸ್ಪೆಕ್ಟ್ರಂ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಹಾಗೂ ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಅಮಿತ್ ಶಾ ಪರ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


