ಟ್ರಾಯ್ ಕಾಯ್ದೆ ತಿದ್ದುಪಡಿ ತಪ್ಪಲ್ಲ: ಜೇಟ್ಲಿ ಸಮರ್ಥನೆ

ನವದೆಹಲಿ: ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ನೇಮಕಾತಿ ಸಂಬಂಧ ಟ್ರಾಯ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ವಿತ್ತ ಸಚಿವ ಅರಣ್ ಜೇಟ್ಲಿ ಕಾಯ್ದೆ ತಿದ್ದುಪಡಿಯಲ್ಲಿ ಸರ್ಕಾರ ಯಾವುದೇ ತಪ್ಪು ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆ ಮಾಡುವುದರಲ್ಲಿ ಕೇಂದ್ರ ಸರ್ಕಾರ ತಪ್ಪು ಮಾಡಿಲ್ಲ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ಪ್ರಧಾನ ಮಂತ್ರಿಗಳಿಗೆ ತಮ್ಮ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವಿರುತ್ತದೆ. ಆದರೆ ನೇಮಕಾತಿ ವಿಚಾರದಲ್ಲಿ ಕೆಲವು ತಾರತಮ್ಯ ಮೂಡಿದ್ದು, ಇದನ್ನು ಸರಿಪಡಿಸಲು ಕೇಂದ್ರ ಸರ್ಕಾರ ತಿದ್ದುಪಡಿಗೆ ಮುಂದಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ.
ನೃಪೇಂದ್ರ ಮಿಶ್ರಾ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟ್ರಾಯ್) ಅಧ್ಯಕ್ಷರಾಗಿದ್ದರು. ಈಗಿರುವ ಕಾಯ್ದೆಯಂತೆ ಟ್ರಾಯ್ ಮುಖ್ಯಸ್ಥರಾಗಿದ್ದವರು ನಿವೃತ್ತಿ ಬಳಿಕ ಎರಡು ವರ್ಷದೊಳಗೆ ಯಾವುದೇ ಸರ್ಕಾರಿ ಹುದ್ದೆ ವಹಿಸಿಕೊಳ್ಳುವಂತಿಲ್ಲ. ಈ ತೊಡಕು ನಿವಾರಿಸಿಕೊಳ್ಳಲು ಕಾಯ್ದೆಗೆ ಮುಂದಾಗಿರುವ ಸರ್ಕಾರ, ಲೋಕಸಭೆಯಲ್ಲಿ ಟ್ರಾಯ್ ತಿದ್ದುಪಡಿ ವಿಧೇಯಕ ಮಂಡಿಸಿದೆ. ಇದಕ್ಕೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


