ರೇವ್ ಪಾರ್ಟಿ: 12 ಯುವತಿರು ಸೇರಿ 26 ಜನರ ಬಂಧನ

ಹೈದರಾಬಾದ್: ಹೈದರಾಬಾದ್ ಶಾಮೀರ್‌ಪೇಟೆ ಪ್ರದೇಶದ ಕೋಳಿ ಫಾರಂ ಆವರಣದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 26 ಜನರನ್ನು ಬಂಧಿಸಿದ್ದು, ಇವರಲ್ಲಿ 12 ಯುವತಿಯರು ಸೇರಿದ್ದಾರೆ.
ರೇವ್‌ಪಾರ್ಟಿ ಆಯೋಜಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಈ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ಅಶ್ಲೀಲ ನೃತ್ಯದಲ್ಲಿ ತೊಡಗಿದ್ದ ಯುವಕ, ಯುವತಿಯರನ್ನು ಬಂಧಿಸಲಾಗಿದೆ ಎಂದು ಶಾಮೀರ್‌ಪೇಟೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಟಿ.ಎನ್ ಬಾಬ್ಜಿ ತಿಳಿಸಿದ್ದಾರೆ.
ಬಂಧಿತ 12 ಮಹಿಳೆಯರಲ್ಲಿ ಮೂವರು ಮುಂಬೈ ಹಾಗೂ ಒಬ್ಬರು ಕೋಲ್ಕತಾ ಮೂಲದವರು ಎಂದು ತಿಳಿದು ಬಂದಿದೆ. ಉಳಿದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಪಾರ್ಟಿಯಲ್ಲಿ ಭಾಗವಹಿಸಿದ್ದ 14 ಜನ ಯುವಕರು ಉದ್ಯಮಿಗಳಾಗಿದ್ದಾರೆ ಇವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ರೇವ್ ಪಾರ್ಟಿ ಸ್ಥಳದಿಂದ 2 ಲಕ್ಷ ರೂ. ನಗದು ಹಾಗೂ ಕೆಲವು ಮೊಬೈಲ್ ಫೋನ್‌ಗಳು ಹಾಗೂ ನಾಲ್ಕು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


