ಈಗಿನ ಸುದ್ದಿ

ನಿರ್ಭಯಾ ಪ್ರಕರಣ; ಇಬ್ಬರು ದೋಷಿಗಳ ಗಲ್ಲುಶಿಕ್ಷೆಗೆ ತಡೆಯಾಜ್ಞೆ

ನಿರ್ಭಯಾ ಪ್ರಕರಣ; ಇಬ್ಬರು ದೋಷಿಗಳ ಗಲ್ಲುಶಿಕ್ಷೆಗೆ ತಡೆಯಾಜ್ಞೆ
Published On :

ನವದೆಹಲಿ: 2012 ದೆಹಲಿಯಲ್ಲಿ ಅರೆವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾಳನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣದಲ್ಲಿ ದೋಷಿಗಳಾಗಿರುವ ವಿನಯ್ ಶರ್ಮಾ ಮತ್ತು ಅಕ್ಷಯ್ ಠಾಕೂರ್ ಅವರ ಗಲ್ಲು ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ ವಿಧಿಸಿದೆ.

ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ವಿನಯ್ ಶರ್ಮಾ ಮತ್ತು ಅಕ್ಷಯ್ ಠಾಕೂರ್‌ಗೆ ದೆಹಲಿ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಇವರಿಬ್ಬರೂ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಸೋಮವಾರ ವಿನಯ್ ಮತ್ತು ಅಕ್ಷಯ್ ಅವರ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಸದ್ಯ ಗಲ್ಲುಶಿಕ್ಷೆಗೆ ತಡೆಯಾಜ್ಞೆ ವಿಧಿಸಿದೆ.

2012ರಲ್ಲಿ ದೆಹಲಿಯಲ್ಲಿ ಖಾಸಗಿ ಬಸ್‌ನೊಳಗೆ ಅರೆವೈದ್ಯಕೀಯ ವಿದ್ಯಾರ್ಥಿನಿ 23ರ ಹರೆಯದ 'ನಿರ್ಭಯಾ'ಳನ್ನು ಮುಖೇಶ್, ಪವನ್, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ರಾಮ್ ಸಿಂಗ್ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕ ಸೇರಿ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಪ್ರಸ್ತುತ ಪ್ರಕರಣದಲ್ಲಿ ಆರೋಪಿಯಾಗಿದ್ದ ರಾಮ್ ಸಿಂಗ್ ಮಾರ್ಚ್ 11, 2013ರಂದು ತಿಹಾರ್ ಜೈಲಿನಲ್ಲಿ ಸಾವನ್ನಪ್ಪಿದ್ದನು.

ಈ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾಗಿರುವ ಅಪ್ರಾಪ್ತ ಬಾಲಕನಿಗೆ 3 ವರ್ಷಗಳ ಗರಿಷ್ಠ ಶಿಕ್ಷೆಯನ್ನು ವಿಧಿಸಲಾಗಿತ್ತು. ಇದರಲ್ಲಿ ಇನ್ನುಳಿದ ನಾಲ್ವರು ವ್ಯಕ್ತಿಗಳ ವಿರುದ್ಧ ಅತ್ಯಾಚಾರ ಮತ್ತು ಹತ್ಯೆಯ ಆರೋಪ ಸೆಪ್ಟೆಂಬರ್ 2013 ಕ್ಕೆ ಸಾಬೀತಾಗಿದ್ದು, ಇವರಿಗೆ ಗಲ್ಲು ಶಿಕ್ಷೆ ನೀಡುವಂತೆ ನ್ಯಾಯಾಲಯ ತೀರ್ಪು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.