ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಮಹೇಲ ಜಯವರ್ಧನೆ

ಲಂಡನ್: ಶ್ರೀಲಂಕಾದ ಕ್ರಿಕೆಟಿಗ ಮಹೇಲ ಜಯವರ್ಧನೆ ಈ ವರ್ಷಾಂತ್ಯದಲ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸೋಮವಾರ ಹೇಳಿಕೆ ನೀಡಿದೆ.
ಆಗಸ್ಟ್ನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಗಳ ನಂತರ ಜಯವರ್ಧನೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ.
37ರ ಹರೆಯದ ಜಯವರ್ಧನೆ ಇತ್ತೀಚೆಗೆ ನಡೆದ ಟ್ವೆಂಟಿ-20 ವಿಶ್ವಕಪ್ ಪಂದ್ಯ ಗೆದ್ದುಕೊಂಡ ನಂತರ ಕುಮಾರ ಸಂಗಕ್ಕಾರ ಜತೆಗೆ ಚುಟುಕು ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು.
ಇನ್ಮುಂದೆ ಜಯವರ್ಧನೆ ಕೇವಲ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ.
ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಜಯವರ್ಧನೆ ಆಡಲಿದ್ದಾರೆ.
ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ನಡೆಯಲಿರುವ ಸರಣಿ ಟೆಸ್ಟ್ ಪಂದ್ಯಗಳ ನಂತರ ಜಯವರ್ಧನೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸಲಿದ್ದಾರೆ ಎಂದು ಪತ್ರ ಬರೆದಿರುವುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಆಶ್ಲೇ ಡಿ ಸಿಲ್ವಾ ಹೇಳಿದ್ದಾರೆ.
ಕಳೆದ 18 ವರ್ಷಗಳಿಂದ ನಾನು ದೇಶವನ್ನು ಪ್ರತಿನಿಧೀಕರಿಸುತ್ತಾ ಬಂದಿದ್ದೀನಿ. ಈ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿರಲಿಲ್ಲ. ಆದರೆ ನಿವೃತ್ತಿ ಘೋಷಿಸುವುದಕ್ಕೆ ಇದು ತಕ್ಕ ಸಮಯ ಎಂದು ಜಯವರ್ಧನೆ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯವನ್ನು ಗೆದ್ದುಕೊಂಡಿದ್ದ ಇವರು ಒಟ್ಟು 145 ಟೆಸ್ಟ್ ಪಂದ್ಯಗಳನ್ನಾಡಿದ್ದು 11,493ರನ್ ಗಳಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


