ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾಗೆ ಕೇಂದ್ರದಲ್ಲಿ ಸ್ಥಾನ?

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಭೂ ಅವ್ಯವಹಾರವನ್ನು ಬಯಲಿಗೆಳೆದಿದ್ದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೆಮ್ಕಾ ಅವರಿಗೆ ಕೇಂದ್ರ ಸರ್ಕಾರದ ಹುದ್ದೆ ನೀಡುವ ಸಾಧ್ಯತೆ ಇದೆ.
ಈ ಸಂಬಂಧ ಖೆಮ್ಕಾ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಚೇರಿಗೆ ಕಳುಹಿಸಿಕೊಡಲಾಗಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.
49 ವರ್ಷದ ಖೆಮ್ಕಾ ಅವರು ಸದ್ಯ ಹರ್ಯಾಣದಲ್ಲಿ ಪತ್ರಾಗಾರ ಇಲಾಖೆಯ ಮಾಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಚಿತ್ರವೆಂದರೆ ಖೆಮ್ಮಾ ಅವರು ತಮ್ಮ 21 ವರ್ಷಗಳ ಸೇವೆಯಲ್ಲಿ 40 ಬಾರಿ ವರ್ಗಾವಣೆಯಾಗಿದ್ದಾರೆ.
ರಾಬರ್ಟ್ ವಾದ್ರಾ ಹಾಗೂ ಡಿಎಲ್ಎಫ್ ನಡುವಿನ ಭೂ ಒಪ್ಪಂದವನ್ನು ರದ್ದುಗೊಳಿಸಿದ ನಂತರ ಹರ್ಯಾಣದ ಕಾಂಗ್ರೆಸ್ ಸರ್ಕಾರ ಪದೇಪದೆ ತಮ್ಮನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿರುವ ಖೆಮ್ಕಾ, ತಮಗೆ ಕೇಂದ್ರದಲ್ಲಿ ಹುದ್ದೆ ನೀಡಬೇಕು ಎಂದು ನೂತನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


