ಈಗಿನ ಸುದ್ದಿ

ಕಾವೇರಿ ವಿವಾದ: ಸುಪ್ರೀಂ ನಿರ್ದೇಶನಕ್ಕೆ ತಮಿಳುನಾಡಿಗೆ ಸೂಚನೆ

ಕಾವೇರಿ ವಿವಾದ: ಸುಪ್ರೀಂ ನಿರ್ದೇಶನಕ್ಕೆ ತಮಿಳುನಾಡಿಗೆ ಸೂಚನೆ
Published On :

ನವದೆಹಲಿ: ಕಾವೇರಿ ಜಲ ವಿವಾದ ಕುರಿತು ವಿಚಾರಣೆ ನಡೆಸಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟ ನಿರ್ದೇಶನ ಪಡೆದುಕೊಳ್ಳುವಂತೆ ಕಾವೇರಿ ನ್ಯಾಯಾಧಿಕರಣ ತಮಿಳುನಾಡು ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ.

7 ವರ್ಷದ ಬಳಿಕ ಕಾವೇರಿ ನ್ಯಾಯಾಧಿಕರಣದ ಐತೀರ್ಪಿನ ಕುರಿತು ಇಂದು ವಿಚಾರಣೆ ನಡೆಸಿದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷ ನ್ಯಾ. ಬಿ.ಎಸ್. ಚವ್ಹಾಣ್ ಅವರು, ಸುಪ್ರೀಂ ಕೋರ್ಟಗೆ ಅರ್ಜಿ ಸಲ್ಲಿಸಿ, ವಿಚಾರಣೆ ನಡೆಸುವ ಬಗ್ಗೆ ಸ್ಪಷ್ಟನೆ ಪಡೆದುಕೊಳ್ಳುವಂತೆ ತಮಿಳುನಾಡಿಗೆ ಸೂಚಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಾಕಿ ಇರುವುದರಿಂದ ಈ ಹಂತದಲ್ಲಿ ನ್ಯಾಯಾಧಿಕರಣ ವಿಚಾರಣೆ ನಡೆಸುವುದು ಸರಿಯಲ್ಲ ಎಂದು ಕರ್ನಾಟಕ ವಿಚಾರಣೆಗೆ ಆಕ್ಷೇಪ ಸಲ್ಲಿಸಿತು.

ಕರ್ನಾಟಕದ ವಾದವನ್ನು ಒಪ್ಪಿದ ನ್ಯಾಯಾಧಿಕರಣ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಬಾಕಿರುವುದರಿಂದ ವಿಚಾರಣೆ ನಡೆಸಲು ನಿರಾಕರಿಸಿತು. ಅಲ್ಲದೆ ವಿಚಾರಣೆ ನಡೆಸಬೇಕೋ ಬೇಡವೋ ಎಂದು ಸುಪ್ರೀಂ ಕೋರ್ಟ್‌ನಿಂದ ನಿರ್ದೇಶನ ಪಡೆಯುವಂತೆ ತಮಿಳುನಾಡಿದೆ ಸೂಚಿಸಿದೆ.

ಈ ಹಿಂದೆ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನ್ಯಾಯಾಧಿಕರಣವನ್ನು ರಚಿಸಿತ್ತು. 2007ರಲ್ಲಿ ಕಾವೇರಿ ಜಲವಿವಾದ ನ್ಯಾಯಾಧಿಕರಣ ತನ್ನ ಐ ತೀರ್ಪನ್ನು ಪ್ರಕಟಸಿತ್ತು. ಆದರೆ ನ್ಯಾಯಾಧಿಕರಣದ ಐತೀರ್ಪಿನ ಸ್ಫಷ್ಟತೆ ಕೋರಿ ಮೂರು ರಾಜ್ಯಗಳು ಅರ್ಜಿ ಸಲ್ಲಿಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.