ಈಗಿನ ಸುದ್ದಿ

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ?

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ?
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲೇ ಇದೀಗ ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಬುಧವಾರ ಬೆಳಗ್ಗೆ ಬಿಜೆಪಿ ಶಾಸಕರು ಪಕ್ಷದ ಕಚೇರಿಯಲ್ಲಿ ಸಭೆ ಸೇರಿದ್ದು ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ಸರ್ಕಾರ ರಚಿಸುವುದಾದರೆ ಅವರಿಗೆ ಸ್ವತಂತ್ರ ಶಾಸಕರು ಹಾಗು ಜೆಡಿ (ಯು)ನ ಓರ್ವ ಶಾಸಕ ಬೆಂಬಲ ನೀಡಲಿದ್ದಾರೆ. ಆದಾಗ್ಯೂ, ಸರ್ಕಾರ ರಚಿಸುತ್ತಿರುವ ಸುದ್ದಿ ಬಗ್ಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕಳೆದ ಡಿಸೆಂಬರ್‌ನಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 31 ಸೀಟುಗಳನ್ನು ಗೆದ್ದುಕೊಂಡಿತ್ತು.  ಆದರೆ ಸಾರ್ವತ್ರಿಕ ಚುನಾವಣೆಯಲ್ಲಿ ಹರ್ಷ ವರ್ಧನ್, ರಮೇಶ್ ಬಿಧೂರಿ ಮತ್ತು ಪರ್ವೇಶ್ ವರ್ಮಾ ಅವರು ಲೋಕಸಭೆಗೆ ಆಯ್ಕೆಯಾಗಿರುವ ಕಾರಣ ಶಾಸಕರ ಸಂಖ್ಯೆ 28 ಕ್ಕೆ ಇಳಿದಿತ್ತು. ಬಿಜೆಪಿಗೆ ಶಿರೋಮಣಿ ಅಕಾಲಿ ದಳದ ಏಕೈಕ ಶಾಸಕರೊಬ್ಬರ ಬೆಂಬಲ ಸಿಕ್ಕಿದೆ.

ಬಿಜೆಪಿಗೆ ಬಹುಮತ ಇಲ್ಲದೇ ಇರುವ ಕಾರಣ ಸರ್ಕಾರ ರಚನೆಗೆ ಬಿಜೆಪಿಯಿಂದ ಸಾಧ್ಯವಾಗಿಲ್ಲ. ಆದರೆ ಇದೀಗ ಬಿಜೆಪಿ ಸರ್ಕಾರ ರಚನೆಯ ಬಗ್ಗೆ ಗಂಭೀರವಾಗಿ ಚಿಂತಿಸಿದೆ ಎನ್ನಲಾಗುತ್ತಿದೆ.

ಏತನ್ಮಧ್ಯೆ, ದೆಹಲಿಯಲ್ಲಿ ಸರ್ಕಾರ ರಚನೆಯಾದರೆ ಜನಕ್‌ಪುರಿ ಶಾಸಕ ಜಗದೀಶ್ ಮುಖಿ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗುತ್ತಿದೆ ಎಂಬ ಸುದ್ದಿಯೂ ಕೇಳಿ ಬಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖಿ, ಇದಲ್ಲ ಸತ್ಯಕ್ಕೆ ದೂರವಾದ ಮಾತು, ಇಲ್ಲಿ ಏನೋ ತಪ್ಪು ತಿಳುವಳಿಕೆಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.