ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ವಿವಾದಿತ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಹೈಕೋರ್ಟ್ ಅಸ್ತು ಎಂದಿದೆ.
ಅತ್ಯಾಚಾರ ಆರೋಪ ಎದುರಿಸುತ್ತಿರುವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದ್ದು, ಅಗತ್ಯ ಬಿದ್ದರೆ ವಿವಾದಿತ ಸ್ವಾಮಿಯನ್ನು ಬಂಧಿಸಿ, ಪುರುಷತ್ವ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದೆ.
ನಿತ್ಯಾನಂದನ ಆಶ್ರಮವಾಸಿಯಾಗಿದ್ದ ಆರತಿ ಸ್ವಾಮಿಯ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ರಾಮನಗರ ಕೋರ್ಟ್, ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶಿಸಿತ್ತು. ಆದರೆ ನಿತ್ಯಾನಂದ ರಾಮನಗರ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಪುರುಷತ್ವ ಪರೀಕ್ಷೆಗೆ ತಡೆ ನೀಡಲಾಗಿತ್ತು.
ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಿರುವ ಹೈಕೋರ್ಟ್ನ ಏಕ ಸದಸ್ಯ ಪೀಠ, ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ಪುರುಷತ್ವ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಇತರೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಬಹುದು ರಾಮನಗರ ಕೋರ್ಟ್ಗೆ ಸೂಚಿಸಿದೆ. ಅಲ್ಲದೆ ಆರೋಪಿಯನ್ನು ಪೊಲೀಸ್ ಕಷ್ಟಡಿಗೆ ತೆಗೆದುಕೊಳ್ಳಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.
ತಮ್ಮ ವಿರುದ್ಧದ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪಗಳನ್ನು ತಳ್ಳಿ ಹಾಕಿದ್ದ ನಿತ್ಯಾನಂದ, ತಮಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವ ಸಾಮರ್ಥ್ಯವಿಲ್ಲ ಎಂದು ಪ್ರತಿಪಾದಿಸಿದ್ದರು. ಈ ಬಗ್ಗೆ ವಿಸ್ತಾರವಾಗಿ ಅಮೆರಿಕ ವೈದ್ಯರು ನೀಡಿರುವ ಪ್ರಮಾಣ ಪತ್ರವನ್ನು ಆಶ್ರಮ ವೆಬ್ ತಾಣದಲ್ಲಿ ಪ್ರಕಟಿಸಿದ್ದಾರೆ.
ಭೂ ಪರಿವರ್ತನಾ ಅರ್ಜಿ ವಜಾ
ರಾಮನಗರ ತಾಲೂಕಿನ ಕಲ್ಲುಗೋಪಹಳ್ಳಿ ಗ್ರಾಮದಲ್ಲಿರುವ ಸರ್ವೆ ನಂಬರ್ 21/7ರ 20 ಎಕರೆ 35 ಗುಂಟೆ ಭೂಮಿಯನ್ನು ಪರಿವರ್ತನೆ ಮಾಡಬೇಕು ಎಂದು ನಿತ್ಯಾನಂದ ಸಲ್ಲಿಸಿದ್ದ ಅರ್ಜಿಯನ್ನು ರಾಮನಗರ ಜಿಲ್ಲಾಧಿಕಾರಿ ವಜಾಗೊಳಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಬಿಡದಿ ಧ್ಯಾನಪೀಠ ನಿತ್ಯಾನಂದ ಸ್ವಾಮಿಯ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ಎಫ್.ಆರ್.ಜಮಾಧಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


