ಈಗಿನ ಸುದ್ದಿ

ಭಾರಿ ಮಳೆ, ಭೂಕುಸಿತ: ಚಾರ್‌ಧಾಮ್ ಯಾತ್ರೆ ಸ್ಥಗಿತ

ಭಾರಿ ಮಳೆ, ಭೂಕುಸಿತ: ಚಾರ್‌ಧಾಮ್ ಯಾತ್ರೆ ಸ್ಥಗಿತ
Published On :

ಡೆಹ್ರಾಡೂನ್: ಉತ್ತರ ಖಂಡದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಪವಿತ್ರ ಚಾರ್‌ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಿಮಾಲಯದ ಪವಿತ್ರ ಯಾತ್ರಾ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಭಾರಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದು, ಕೇದಾರನಾಥ್, ಬದ್ರಿನಾಥ್, ಯಮುನೋತ್ರಿ ಮತ್ತು ಗಂಗೋತ್ರಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉತ್ತರಾಖಂಡ ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ರಾಜ್ಯದಲ್ಲಿ ಪ್ರವಾಹ ಭೀತಿ ಉಂಟುಮಾಡಿದ್ದು, ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಹಲವು ಜನರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಪ್ರವಾಸಿಗರ ಮತ್ತು ಸ್ಥಳೀಯರ ರಕ್ಷಣೆಗಾಗಿ ಉತ್ತರಾಖಂಡ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಯಾತ್ರಾ ಸ್ಥಳಗಳಲ್ಲಿಯೇ ತಾತ್ಕಾಲಿಕ ಶಿಬಿರಗಳನ್ನು ನಿರ್ಮಿಸಿದೆ. ಅಲ್ಲದೆ ಯಾತ್ರಾರ್ಥಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲು ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಅಂತೆಯೇ ಉತ್ತರ ಖಂಡದ ಎಲ್ಲ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಕಳೆದ ವರ್ಷ ಉಂಟಾಗಿದ್ದ ಭಾರಿ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿದ್ದ ಚಮೋಲಿ, ರುದ್ರಪ್ರಯಾಗ, ಉತ್ತರಕಾಶಿ ಮತ್ತು ಪಿಥೋರ್‌ಗಡ ಪ್ರದೇಶಗಳಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲದೆ ಈ ಪ್ರದೇಶಗಳಿಗೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿಗಳನ್ನು ರವಾನಿಸಿದೆ.

ಕಳೆದ ವರ್ಷ ಇದೇ ಸಮಯದಲ್ಲಿ ಸಂಭವಿಸಿದ್ದ ಭಾರಿ ಪ್ರವಾಹದಿಂದ ಸಾವಿರಾರು ಯಾತ್ರಾರ್ಥಿಗಳು ಕಾಣೆಯಾಗಿ, ನೂರಾರು ಮಂದಿ ಧಾರುಣವಾಗಿ ಸಾವಿಗೀಡಾಗಿದ್ದರು. ಈ ಘಟನೆಯಿಂದ ಪಾಠ ಕಲಿತಂತಿರುವ ಉತ್ತರಖಂಡ ಸರ್ಕಾರ, ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಮುಂಜಾಕ್ರತಾ ಕ್ರಮಕ್ಕೆ ಮುಂದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.