ರಷ್ಯಾದ ಜತೆಗಿನ ಸಂಬಂಧ ಇನ್ನಷ್ಟು ಉತ್ತಮಗೊಳಿಸಲು ಭಾರತ ಆಗ್ರಹ

ಫೋರ್ಟಲೇಜಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ರಷ್ಯಾದ ಅಧ್ಯಕ್ಷ ವ್ಲಾಡಮಿರ್ ಪುಟಿನ್ ಜತೆ ಮಾತುಕತೆ ನಡೆಸಿದ್ದಾರೆ.
ಸೋಮವಾರ ರಾತ್ರಿ ಚೀನಾ ಅಧ್ಯಕ್ಷ ಕ್ಸಿ ಚಿನ್ಪಿಂಗ್ ಜತೆ ಮೋದಿ ಮಾತುಕತೆ ನಡೆದಿತ್ತು.
ರಷ್ಯಾದ ಅಧ್ಯಕ್ಷರ ಜತೆಗಿನ ಮಾತುಕತೆಯ ನಂತರ ಮಾತನಾಡಿದ ಮೋದಿ, ಡಿಸೆಂಬರ್ನಲ್ಲಿ ರಷ್ಯಾ ನಾಯಕರನ್ನು ಭಾರತಕ್ಕೆ ಆಹ್ವಾನಿಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ.
ಅದೇ ವೇಳೆ ರಷ್ಯಾ ಜತೆಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ರಷ್ಯಾ ಅಧ್ಯಕ್ಷರ ಜತೆಗೆ ಮಾತುಕತೆ ನಡೆಸಿರುವುದಾಗಿ ಮೋದಿ ಹೇಳಿದ್ದಾರೆ.
2 ದಿನಗಳ ಕಾಲ ಬ್ರೆಜಿಲ್ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಪುಟಿನ್ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ರಷ್ಯಾದ ಸಹಾಯ ಅಪೇಕ್ಷಿಸಿದ ಮೋದಿ ಭಾರತದೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ಉತ್ತಮ ಪಡಿಸಲು ರಷ್ಯಾ ಸಹಕಾರ ನೀಡುತ್ತದೆ ಎಂಬ ಭರವಸೆ ತಮಗಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


