ಶಿಕ್ಷಣ ಪ್ರತಿಯೊಬ್ಬರ ಹಕ್ಕು: ಬಸವರಾಜು ಗುರಿಕಾರ
ಬೆಂಗಳೂರು: ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದ್ದು ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ( ಆರ್.ಟಿ.ಇ) ಸಮರ್ಪಕವಾಗಿ ಜಾರಿಗೊಳಿಸುವ ಅಗತ್ಯ ಇದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಒಂದು ಸಲಹಾ ಮಂಡಳಿಯನ್ನು ರಚಿಸಿದೆ. ಆದರೆ ಈ ಸಲಹಾ ಮಂಡಳಿ ಆರ್.ಟಿ.ಇ ಕಾಯ್ದೆ ಮತ್ತು ನಿಯಮಗಳ ಆಶಯಕ್ಕೆ ವಿರುದ್ದವಾಗಿದೆ. ಹೀಗಾಗಿ ಆರ್.ಟಿ.ಇ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದರು.
ರಾಜ್ಯ ಸರ್ಕಾರ ರಚಿಸಿರುವ ಸಲಹಾ ಸಮಿತಿಯಲ್ಲಿ ಕೇವಲ ಖಾಸಗಿ ಶಾಲೆಯ ಪ್ರತಿನಿಧಿಗಳು ಮಾತ್ರ ಇದ್ದು, ಈ ಸಮಿತಿಯನ್ನು ಪುನರ್ ರಚನೆ ಮಾಡಿ ಸಮಿತಿಯಲ್ಲಿ ಪ್ರಥಮಿಕ ಶಿಕ್ಷಣ ಮತ್ತು ಮಕ್ಕಳ ಕ್ಷೇತ್ರದ ತಜ್ಞರನ್ನೊಳಗೊಂಡ 15 ವ್ಯಕ್ತಿಗಳ ರಾಜ್ಯಸಲಹಾ ಸಮಿತಿ ರಚಿಸಬೇಕೆಂದು ಒತ್ತಾಯಿಸದರು.
ರಾಜ್ಯದ ಬಹುತೇಕ ಶಾಲೆಗಳಲ್ಲಿ ಶೌಚಾಲಯಗಳ ಕೊರತೆ ಇದ್ದು, ಮೂಲಭೂತ ಸೌಕರ್ಯಗಳ ಸಮಸ್ಯೆ ಹೆಚ್ಚಾಗಿದೆ. ಗುಣಾತ್ಮಕ ಶಿಕ್ಷಣವಂತೂ ಸರ್ಕಾರಿ ಶಾಲೆಗಳಲ್ಲಿ ಸಿಗುವುದು ಬಹಳ ಅಪರೂಪವಾಗಿದೆ ಎಂದರು.
ಖಾಸಗಿ ಶಾಲೆಗಳಲ್ಲಿ ಉತ್ತಮ ರೀತಿಯ ಸೌಲಭ್ಯಗಳು ದೊರೆಯುತ್ತಿರುವುದರಿಂದಲೇ, ಜನ ಖಾಸಗಿ ಶಾಲೆಗಳ ಮೊರೆ ಹೋಗುತ್ತಿರುವುದು, ಸರ್ಕಾರಿ ಶಾಲೆ ಖಾಲಿ ಹೊಡೆಯುವುದಕ್ಕೆ ಇವೇ ಪ್ರಮುಖ ಕಾರಣ ಎಂದು ಗುರಿಕಾರರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

